image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕದ್ರಿ ಉದ್ಯಾನವನದಲ್ಲಿ ಕಲಾ ನಡಿಗೆ ಜನರ ಬಳಿಗೆ ಕಾರ್ಯಕ್ರಮ: ಸಂಗೀತದಿಂದ ಮಾನಸಿಕ ಒತ್ತಡ ನಿವಾರಣೆ - ಅರುಣಾ ಪ್ರಭ

ಕದ್ರಿ ಉದ್ಯಾನವನದಲ್ಲಿ ಕಲಾ ನಡಿಗೆ ಜನರ ಬಳಿಗೆ ಕಾರ್ಯಕ್ರಮ: ಸಂಗೀತದಿಂದ ಮಾನಸಿಕ ಒತ್ತಡ ನಿವಾರಣೆ - ಅರುಣಾ ಪ್ರಭ

ಮಂಗಳೂರು: ಸಂಗೀತ ಆಲಿಸುವುದರಿಂದ ಮಾನಸಿಕ ಒತ್ತಡವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡಬಹುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಮಹಾ ಪ್ರಬಂಧಕ ಅರುಣಾ ಪ್ರಭ ಅಭಿಪ್ರಾಯಪಟ್ಟಿದ್ದಾರೆ.

ಕದ್ರಿ ಉದ್ಯಾನವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಾ ಸಾಧನಾ ಮಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಆಯೋಜಿಸಲಾದ 'ಕಲಾ ನಡಿಗೆ ಜನರ ಬಳಿಗೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅಭಿನಂದನೀಯವಾಗಿದ್ದು, ಇದು ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ, ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ವೇಳೆ ವಿಭಾ ಶ್ರೀನಿವಾಸ್ ನಾಯಕ್ ಅವರ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕದ್ರಿ ಉದ್ಯಾನವನ ಸಲಹಾ ಸಮಿತಿ ಸದಸ್ಯ ಜಗನ್ನಾಥ ಗಾಂಭೀರ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ತೋಟಗಾರಿಕೆ ಇಲಾಖೆಯ ರುಕ್ಮಯ್ಯ, ಪತ್ರಕರ್ತ ಶ್ರೀನಿವಾಸ್ ನಾಯಕ್, ರಾಜೇಶ್ ದಡ್ಡಂಗಡಿ ಹಾಗೂ ಕಲಾವಿದರಾದ ಹೇಮಂತ್ ಭಾಗವತ್, ಅಶ್ವಿತ್ ಪ್ರಭು, ದೀಪ್ತಿ, ಭೂಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ