ಸುಳ್ಯ: ಬಿಜೆಪಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ (SIR) ಹಾಗೂ ಸಂಘಟನಾತ್ಮಕ ಸಭೆಗಳ ಜೊತೆಗೆ BLA-2ಗಳಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು ಜೂನ್ 9 ಹಾಗೂ ಜೂನ್ 10ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಜೂನ್ 9ರಂದು ಕೊಯ್ಲ ಮಹಾಶಕ್ತಿ ಕೇಂದ್ರದ ಸಭೆ ಗೊಳಿತೊಟ್ಟು ಸಿದ್ದಿವಿನಾಯಕ ಸಭಾಂಗಣದಲ್ಲಿ, ಕಡಬ ಮಹಾಶಕ್ತಿ ಕೇಂದ್ರದ ಸಭೆ ಕೋಡಿಂಬಾಳ ಭಜನಾ ಮಂದಿರದಲ್ಲಿ, ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ಸಭೆ ಕೈಕಂಬ ಭಜನಾ ಮಂದಿರದಲ್ಲಿ ನಡೆಯಿತು. ಜೂನ್ 10ರಂದು ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಸಭೆ ಪೆರುವಾಜೆಯ ಜೆ.ಡಿ. ಹಾಲ್‌ನಲ್ಲಿ, ಜಾಲ್ಸೂರು ಮಹಾಶಕ್ತಿ ಕೇಂದ್ರ ಹಾಗೂ ಸುಳ್ಯ ನಗರ ಸಭೆ ಪಕ್ಷದ ಕಚೇರಿಯಲ್ಲಿ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಸಭೆ ಎಲಿಮಲೆಯ ಜ್ಞಾನದೀಪದಲ್ಲಿ ಜರುಗಿತು.
ಸಭೆಗಳಲ್ಲಿ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸಲು ವಿವಿಧ ಜವಾಬ್ದಾರಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಲಾಯಿತು.
ಈ ಸಭೆಗಳಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೇಂಕಟ್ ವಳಲಂಬೆ, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲ ಉಸ್ತುವಾರಿ ಪ್ರಸನ್ನ ಮಾರ್ತ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಕಾರ್ಯದರ್ಶಿ ಪುಷ್ಪಮೇದಪ್ಪ, ವಿಕಸಿತ ಭಾರತ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಹಾಗೂ BLA-1 ಹರೀಶ್ ಕಂಜಿಪಿಲಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಸುಧೀರ್ ಶೆಟ್ಟಿ, ಸಹ ಸಂಚಾಲಕ ಪ್ರಸನ್ನ ದರ್ಬೆ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿಗಳು ವಿನಯ್ ಕಂದಡ್ಕ ಮತ್ತು ಪ್ರದೀಪ್ ರೈ ಮನವಳಿಕೆ, ಕಾರ್ಯದರ್ಶಿಗಳು ಶಿವಪ್ರಸಾದ್ ಮತ್ತು ತೇಜಸ್ವಿನಿ ಕಟ್ಟಪುಣಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ., ಎಸ್.ಟಿ. ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ ಸೇರಿದಂತೆ ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರಗಳ ಪ್ರಮುಖರು, BLA-2ಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.