image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರ ನೇಮಕ

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರ ನೇಮಕ

ಮಂಗಳೂರು: ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ  ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ, ಸಹ ಸಂಚಾಲಕರನ್ನು ನೇಮಕಗೊಳಿಸಿದ್ದು,ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ ಗ್ರಾಮಾಂತರ ಮಂಡಲ ನಿಕಟಪೂರ್ವ ಕಾರ್ಯದರ್ಶಿ ನಿತೀಶ್ ಕುಮಾರ್ ಹಾಗೂಸಹ ಸಂಚಾಲಕರಾಗಿ ನಗರ ಮಂಡಲ ಉಪಾಧ್ಯಕ್ಷರಾಗಿರುವ ಸಂತೋಷ್ ಕುಮಾರ್ ಕೈಕಾರ ಇವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರ ಸಮಿತಿ ನಿಯುಕ್ತಿಗೊಳಿಸಿದೆ.ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರಿನವರ ಆದ ಕಿಶೋ‌ರ್ ಕುಮಾರ್ ಬೊಟ್ಯಾಡಿ ಕಣದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರಿಗೆ ಮತದಾನ ಮಾಡುವ ಅವಕಾಶ ಇರುತ್ತದೆ.

Category
ಕರಾವಳಿ ತರಂಗಿಣಿ