image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಥಾಮಸ್ ಕಪ್ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಾದ

ಥಾಮಸ್ ಕಪ್ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಾದ

ಧರ್ಮಸ್ಥಳ : ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ ೨೦೨೬ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ತಮ್ಮ ಕುಟುಂಬ ಸಮೇತರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಆಯುಷ್ ಶೆಟ್ಟಿ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಶದ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಿರುವ ಆಯುಷ್ ಶೆಟ್ಟಿ ಅವರ ಅಸಾಧಾರಣ ಸಾಧನೆಯನ್ನು ಶ್ಲಾಘಿಸಿದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರು. ಮುಂದಿನ ದಿನಗಳಲ್ಲಿ ಅವರು ಕ್ರೀಡಾ ಜಗತ್ತಿನಲ್ಲಿ ಇನ್ನಷ್ಟು ಉನ್ನತ ಯಶಸ್ಸು ಸಾಧಿಸಿ ದೇಶಕ್ಕೆ ಮತ್ತು ರಾಜ್ಯಕ್ಕೆ ಅಪಾರ ಕೀರ್ತಿ ತರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಶ್ರೀ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಹಾಗೂ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ