image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಡುಪ್ರಾಣಿಗಳ ಹಾವಳಿ: ಕೋವಿ ಪರವಾನಗಿ ನವೀಕರಣದ ಎನ್.ಒ.ಸಿ.ಗಾಗಿ ರೈತರ ಪರ ದನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಕಾಡುಪ್ರಾಣಿಗಳ ಹಾವಳಿ: ಕೋವಿ ಪರವಾನಗಿ ನವೀಕರಣದ ಎನ್.ಒ.ಸಿ.ಗಾಗಿ ರೈತರ ಪರ ದನಿ ಎತ್ತಿದ ಕಿಶೋರ್ ಕುಮಾರ್ ಪುತ್ತೂರು

ಮಂಗಳೂರು: ಕಾಡುಪ್ರಾಣಿಗಳ ಹಾವಳಿಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅನಿವಾರ್ಯವಾಗಿರುವ ಕೋವಿ (ಬಂದೂಕು) ಪರವಾನಗಿ ನವೀಕರಣಕ್ಕೆ ಅಗತ್ಯವಿರುವ ನಿರಾಪೇಕ್ಷಣಾ ಪತ್ರ (ಎನ್.ಒ.ಸಿ.) ಪಡೆಯಲು ದಕ್ಷಿಣ ಕನ್ನಡ ಜಿಲ್ಲೆಯ ರೈತರು ಎದುರಿಸುತ್ತಿರುವ ತೀವ್ರ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ನೇತೃತ್ವದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, ರೈತರಿಗೆ ಎನ್.ಒ.ಸಿ. ನೀಡುವ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಅನಗತ್ಯ ಅಡಚಣೆಗಳನ್ನು ತಕ್ಷಣವೇ ನಿವಾರಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನಿಯೋಗವು ಬಲವಾಗಿ ಒತ್ತಾಯಿಸಿತು. ರೈತರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿದ ಎಸ್.ಪಿ. ಅವರು, ಕೂಡಲೇ ಈ ಪ್ರಕ್ರಿಯೆಯನ್ನು ಸರಳೀಕರಿಸಿ, ಶೀಘ್ರದಲ್ಲಿಯೇ ರೈತರಿಗೆ ಎನ್.ಒ.ಸಿ. ಒದಗಿಸುವ ಭರವಸೆಯನ್ನು ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು, ರೈತರಿಗೆ ನ್ಯಾಯ ದೊರಕುವವರೆಗೂ ಮತ್ತು ಅವರ ಕೈಗೆ ಸುಲಭವಾಗಿ ಎನ್.ಒ.ಸಿ. ಸಿಗುವವರೆಗೂ ಭಾರತೀಯ ಜನತಾ ಪಾರ್ಟಿ ರೈತರ ಬೆಂಬಲಕ್ಕೆ ಬಂಡೆಯಂತೆ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೇಮಾನಂದ ಶೆಟ್ಟಿ, ಪುತ್ತೂರು ನಗರ ಮಂಡಲದ ಅಧ್ಯಕ್ಷರಾದ ಶ್ರೀ ಶಿವಕುಮಾರ್ ಕಲ್ಲಿಮಾರ್ ಸೇರಿದಂತೆ ಅನೇಕ ಪ್ರಗತಿಪರ ಕೃಷಿಕರು ಉಪಸ್ಥಿತರಿದ್ದರು. ಅನ್ನದಾತರ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವ ತನಕ ಹೋರಾಟ ಮುಂದುವರಿಯಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Category
ಕರಾವಳಿ ತರಂಗಿಣಿ