image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯ

ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯ

ಉಪ್ಪಿನಂಗಡಿ: 2023ರಲ್ಲಿ ನಡೆದ ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಾರ್ಚ್ 20, 2023ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲದಲ್ಲಿ ದರೋಡೆ ನಡೆದಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರು, ಸಮಗ್ರ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬುವವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

​ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ಪಿ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮನು ಬಿ.ಕೆ. ಅವರು, ಆರೋಪಿಗಳ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರಿಗೂ ತಲಾ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ 10,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕ ದಿವ್ಯರಾಜ ಹೆಗ್ಡೆ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Category
ಕರಾವಳಿ ತರಂಗಿಣಿ