image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕದ್ರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ಕದ್ರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ

ಮಂಗಳೂರು: ಅಂತರರಾಷ್ಟ್ರೀಯ  ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಮಂಗಳೂರಿನ ಕದ್ರಿ ಪದವಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಿಶೇಷ ಯೋಗ ಶಿಬಿರವನ್ನು ಆಯೋಜಿಸಲಾಗಿತ್ತು. ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ್ ಟ್ರಸ್ಟ್‌ನ ಜಿಲ್ಲಾಧ್ಯಕ್ಷರಾದ ಯೋಗ ಗುರು ಡಾ. ಎಂ. ಜಗದೀಶ್ ಶೆಟ್ಟಿ ಬಿಜೈ ಅವರ ನೇತೃತ್ವದಲ್ಲಿ ನಡೆದ ಇದು 250ನೇ ಉಚಿತ ಯೋಗ ಶಿಬಿರವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಯೋಗದ ಪ್ರಯೋಜನಗಳನ್ನು ಪಡೆದುಕೊಂಡರು.

​ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಅವರು ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನಕ್ಕೆ ಯೋಗಾಭ್ಯಾಸ ಅತ್ಯಂತ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಮತ್ತೋರ್ವ ಮುಖ್ಯ ಅತಿಥಿ, ಜಿಲ್ಲಾ ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ. ಪ್ರಕಾಶ್ ಎ. ಜೆ. ಅವರು ಮಾತನಾಡಿ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಯೋಗವು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಎಂದು ತಿಳಿಸಿದರು. ಈ ವೇಳೆ ಯೋಗ ಗುರು ಡಾ. ಜಗದೀಶ್ ಶೆಟ್ಟಿ ಅವರು ಮಕ್ಕಳಿಗೆ ವಿಶೇಷ ಯೋಗಾಸನಗಳ ಪ್ರಾತ್ಯಕ್ಷಿಕತೆಯನ್ನು ನೀಡಿ, ಅವುಗಳ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ವಾರ್ಡನ್ ಸರಸ್ವತಿ, ಸಹಶಿಕ್ಷಕಿ ಭಾರತಿ ಶೆಟ್ಟಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ