image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವೃತ್ತಿಯಲ್ಲಿ ಸೃಜನಶೀಲತೆ ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಖಂಡಿತ: ಮನಮೋಹನ್ ನಾಯಕ್

ವೃತ್ತಿಯಲ್ಲಿ ಸೃಜನಶೀಲತೆ ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ಸು ಖಂಡಿತ: ಮನಮೋಹನ್ ನಾಯಕ್

ಉಜಿರೆ: ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಆಶ್ರಯದಲ್ಲಿ ನಡೆಯುತ್ತಿರುವ ರುಡ್ ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುವುದೇ ಒಂದು ಸೌಭಾಗ್ಯವಾಗಿದೆ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಜೀವನದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಇದರ ಜೊತೆಗೆ ಪ್ರತಿಯೊಬ್ಬರಲ್ಲೂ ಸಮಯಪಾಲನೆ ಮತ್ತು ಶಿಸ್ತು ಇರಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ‌ ಮಾಧ್ಯಮ (ಕೇಂದ್ರೀಯ ಪಠ್ಯ) ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮನಮೋಹನ್ ನಾಯಕ್ ಅವರು ಅಭಿಪ್ರಾಯಪಟ್ಟರು. ಅವರು ಉಜಿರೆಯ ಸಿದ್ಧವನದಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ 35 ದಿನಗಳ ಕಾಲ ನಡೆದ ವಸತಿಯುತ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಸುನೀಲ್ ನಾಯ್ಕೆ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಇಂದಿನ ಆಧುನಿಕ ಕಾಲದಲ್ಲಿ ಹಣಕಾಸಿನ ಜ್ಞಾನ ಮತ್ತು ಡಿಜಿಟಲ್ ವ್ಯವಹಾರಗಳ ಅರಿವು ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ ಎಂದು ತಿಳಿಸುತ್ತಾ, ತರಬೇತಿ ಪಡೆದ ಎಲ್ಲರಿಗೂ ಉತ್ತಮ ಭವಿಷ್ಯ ಸಿಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಶ್ರೀಮತಿ ಮಾದವಿ.‌ಎಂ. ರೈ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರೂಪಿಸಿದರು. ಕೊನೆಯಲ್ಲಿ ಸಂಸ್ಥೆಯ ಮತ್ತೊಬ್ಬ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ್ ಕೆ. ಜೈನ್ ಅವರು ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ಕುಮಾರಿ ಜಲಜಾಕ್ಷಿ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿಕೊಟ್ಟರೆ, ತರಬೇತಿ ಪಡೆದ ಶ್ರೀಮತಿ ಜಯಲಕ್ಷೀ ಹಾಗೂ ಕುಮಾರಿ ಶೈಲಜಾ ಅವರು ಸಂಸ್ಥೆಯಲ್ಲಿ ತಮಗಾದ ತರಬೇತಿಯ ಅನುಭವಗಳನ್ನು ಎಲ್ಲರೊಂದಿಗೆ ಹಂಚಿಕೊಂಡರು.

Category
ಕರಾವಳಿ ತರಂಗಿಣಿ