image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಉದ್ಘಾಟನೆಗೆ ಅಂತರರಾಷ್ಟ್ರೀಯ ಆಟಗಾರ ಆಯುಷ್ ಶೆಟ್ಟಿ

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಉದ್ಘಾಟನೆಗೆ ಅಂತರರಾಷ್ಟ್ರೀಯ ಆಟಗಾರ ಆಯುಷ್ ಶೆಟ್ಟಿ

ಮಂಗಳೂರು : ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಖ್ಯಾತ ಬ್ಯಾಡ್ಮಿಂಟನ್ ಆಟಗಾರ ಆಯುಷ್ ಶೆಟ್ಟಿ ಅವರು ಜೂನ್ 21ರಂದು ಮಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿರುವ ‘ಡಿ ಕೆ ಬಿ ಎ ಮೆಂಬರ್ಸ್ ಪ್ರೀಮಿಯರ್ ಲೀಗ್ ಸೀಸನ್-1’ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಅನ್ನು ಅವರು ಉದ್ಘಾಟಿಸಲಿದ್ದಾರೆ. ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಜೂನ್ 21ರಂದು ಬೆಳಿಗ್ಗೆ 8 ಗಂಟೆಗೆ ಈ ಕ್ರೀಡಾಕೂಟವು ಅದ್ಧೂರಿಯಾಗಿ ಆರಂಭಗೊಳ್ಳಲಿದೆ.

ಇದೇ ಸುಸಂದರ್ಭದಲ್ಲಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಅಂತರರಾಷ್ಟ್ರೀಯ ಆಟಗಾರ ಆಯುಷ್ ಶೆಟ್ಟಿ ಅವರಿಗೆ ವಿಶೇಷ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಭಾಗವಾಗಿ ಅವರು ಅಲ್ಲಿ ನೆರೆಯುವ ಮಕ್ಕಳೊಂದಿಗೆ ಸಂವಾದ ನಡೆಸಿ ಕ್ರೀಡಾ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ