ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರವು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರು, ಎಸ್‌ಬಿಆರ್ ಪ್ರಕ್ರಿಯೆಯಿಂದ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರುಗಳು ಉಳಿಯಬೇಕು. ಇದಕ್ಕಾಗಿ ಕಾರ್ಯಕರ್ತರು ಮುಂದಿನ ಮೂರು ತಿಂಗಳ ಕಾಲ ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ್ ರೈ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ಪೂಜಾರಿ, ಬಶೀರ್ ಕಣ್ಣೂರು, ದೀಕ್ಷಿತ್ ಅತ್ತಾವರ, ಜಿಲ್ಲಾ ಉಸ್ತುವಾರಿ ನಾಸಿರ್ ಸಾಮಾಣಿಗೆ ಹಾಗೂ ಆಸಿಫ್ ಬಜಾಲ್ ಉಪಸ್ಥಿತರಿದ್ದರು. ನಾಸಿರ್ ಪೆರಿಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.