image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ಆಗಸ್ಟ್ 7 ಮತ್ತು 8ರಂದು 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ಮಂಗಳೂರು: ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ 'ಆಳ್ವಾಸ್ ಪ್ರಗತಿ'ಯು ಈ ಬಾರಿ ತನ್ನ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ಈ ಮೇಳವು ಆಗಸ್ಟ್ 7 ಮತ್ತು 8, 2026ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ಈ ಉದ್ಯೋಗ ಮೇಳವು ಸಂಪೂರ್ಣ ಉಚಿತವಾಗಿರುತ್ತದೆ. ಈ ಬಾರಿಯ ಮೇಳದಲ್ಲಿ ಸುಮಾರು 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಬ್ಯಾಂಕಿಂಗ್, ಹಣಕಾಸು, ಮಾಹಿತಿ ತಂತ್ರಜ್ಞಾನ, ಉತ್ಪಾದನೆ, ಮಾರಾಟ, ಆತಿಥ್ಯ, ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ವಲಯಗಳ ಪ್ರಮುಖ ಸಂಸ್ಥೆಗಳು ನೇಮಕಾತಿ ನಡೆಸಲಿವೆ.
ವೈದ್ಯಕೀಯ, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ವಿಜ್ಞಾನ ಹಾಗೂ ಇನ್ನಿತರ ಪದವಿ/ಡಿಪ್ಲೋಮಾ ಹೊಂದಿರುವ ಅಭ್ಯರ್ಥಿಗಳು ಈ ಮೇಳದ ಪ್ರಯೋಜನ ಪಡೆಯಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ www.alvaspragati.com ವೆಬ್‌ಸೈಟ್‌ನಲ್ಲಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕು. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಆಗಸ್ಟ್ 7ರಂದು ಬೆಳಿಗ್ಗೆ 8.00 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು.
ಈ ಪತ್ರಿಕಾಗೋಷ್ಠಿಯಲ್ಲಿ  ಆಡಳಿತ ಟ್ರಸ್ಟಿ ಶ್ರೀ ವಿವೇಕ ಆಳ್ವ, ನೇಮಕಾತಿ ವಿಭಾಗದ ಮುಖ್ಯಸ್ಥೆ ಕುಮಾರಿ ರಂಜಿತ ಆಚಾರ್ಯ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಶ್ರೀ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 9741440490, 9611750531, 7975223865 ಸಂಖ್ಯೆಗಳನ್ನು ಸಂಪರ್ಕಿಸಬಹುದು.

Category
ಕರಾವಳಿ ತರಂಗಿಣಿ