image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ 2.75 ಕೋಟಿ ವೆಚ್ಚದ ಕೊರಗ ಕಾಲೊನಿ ರಸ್ತೆ ಉದ್ಘಾಟನೆ

ಕಡಬದಲ್ಲಿ 2.75 ಕೋಟಿ ವೆಚ್ಚದ ಕೊರಗ ಕಾಲೊನಿ ರಸ್ತೆ ಉದ್ಘಾಟನೆ

ಕಡಬ : ಕಡಬ ತಾಲೂಕಿನ ರಾಮಕುಂಜ, ಪೆರಾಬೆ ಮತ್ತು ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯಲ್ಲಿ ಕೇಂದ್ರ ಸರ್ಕಾರದ ಪಿಎಂ-ಜನ್‌ಮನ್ ಯೋಜನೆಯಡಿ 2.75 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ನೂತನ ರಸ್ತೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉದ್ಘಾಟಿಸಿದರು. ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಹಾಗೂ ಕೊರಗ ಸಮುದಾಯದ ಹಿರಿಯ ಮಹಿಳೆ ಚೋಮು ಅವರ ಸಮ್ಮುಖದಲ್ಲಿ ಈ ರಸ್ತೆ ಲೋಕಾರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಮಂತ್ರದೊಂದಿಗೆ ಮುನ್ನಡೆಯುತ್ತಿದೆ. ದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಬಡವರ್ಗದ ಶೋಷಿತ ಹಾಗೂ ಬುಡಕಟ್ಟು ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ 2023ರಲ್ಲಿ 'ಪಿಎಂ ಜನ್‌ಮನ್' ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯ ಮಾರ್ಗಸೂಚಿಗಳ ಅನ್ವಯ ಜೇನು ಕುರುಬ ಮತ್ತು ಕೊರಗ ಸಮುದಾಯಗಳು ಹೆಚ್ಚಿರುವ ಪ್ರದೇಶಗಳನ್ನು ಸಮೀಕ್ಷೆಯ ಮೂಲಕ ಗುರುತಿಸಿ, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಈಗ ಪರಕ್ಕಾಲು ಕೊರಗ ಕಾಲೊನಿಯಲ್ಲಿ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

ಮುಂದುವರಿದು ಮಾತನಾಡಿದ ಅವರು, ಪ್ರಧಾನಮಂತ್ರಿ ಜನ್‌ಮನ್‌ ಯೋಜನೆ ಒಂದು ಅದ್ಭುತ ಪರಿಕಲ್ಪನೆಯಾಗಿದ್ದು, ಬುಡಕಟ್ಟು ಸಮುದಾಯದ ಪ್ರತಿಯೊಬ್ಬ ಸದಸ್ಯರೂ ಸರ್ಕಾರಿ ಯೋಜನೆಗಳಿಂದ ಪ್ರಯೋಜನ ಪಡೆಯುವಂತಾಗುವುದು ಪ್ರಧಾನಿ ಮೋದಿ ಸರ್ಕಾರದ ಮುಖ್ಯ ಆಶಯವಾಗಿದೆ. ಈ ಹಿಂದೆ ಕೇವಲ ವೋಟ್ ಬ್ಯಾಂಕ್ ರಾಜಕಾರಣದ ಲೆಕ್ಕಾಚಾರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದವು. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಯಾವುದೇ ತಾರತಮ್ಯವಿಲ್ಲದೆ, ಸಮಾಜದ ಕಟ್ಟಕಡೆಯ ಶೋಷಿತ ಜನರ ಅಭಿವೃದ್ಧಿಯನ್ನೇ ಮುಖ್ಯ ಗುರಿಯಾಗಿಸಿಕೊಂಡು ಹತ್ತಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ