ಮಂಗಳೂರು : ನಗರದ ನ್ಯಾಯಾಲಯದ ಆವರಣದಲ್ಲಿ ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೆ. ಶೇಣವ ಅವರು ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು ಹಾಗೂ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಮತ್ತು ಕರ್ನಾಟಕ ವಕೀಲ ಪರಿಷತ್ತಿನ ಸದಸ್ಯ ಶ್ರೀ ಪದ್ಮಪ್ರಸಾದ್ ಹೆಗ್ಡೆ ಅವರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಹಿರಿಯ ವಕೀಲ ಶ್ರೀ ಪ್ರೇಮನಾಥ್ ಅವರನ್ನು ಗೌರವಿಸಲಾಯಿತು. ಅಲ್ಲದೆ, ಸಂಘದ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ನೂತನ ಅಧ್ಯಕ್ಷ ಜಗದೀಶ್ ಕೆ. ಶೇಣವ ಸ್ವಾಗತಿಸಿದರೆ, ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ. ವಂದನಾರ್ಪಣೆ ಮಾಡಿದರು. ವಕೀಲ ಸುಹಾನ್ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಈ ಸಮಾರಂಭದಲ್ಲಿ ನ್ಯಾಯಾಂಗ ಅಧಿಕಾರಿಗಳು, ಹಿರಿಯ ಹಾಗೂ ಕಿರಿಯ ವಕೀಲರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.