image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್‌ನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಮಂಗಳೂರು ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್‌ನ ನೂತನ ಕಾರ್ಯಕಾರಿ ಸಮಿತಿ ಆಯ್ಕೆ

ಮಂಗಳೂರು : ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀ ರಾಜೇಶ್ ಶೆಟ್ಟಿ ಹಾಗೂ ಅಧ್ಯಕ್ಷರಾಗಿ ಶ್ರೀ ಅಶೋಕ್ ಶೆಟ್ಟಿ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ದೀಪಕ್ ನಾನಿಲ್, ಉಪಾಧ್ಯಕ್ಷರಾಗಿ ಶ್ರೀ ಚಂದ್ರಶೇಖರ್, ಕೋಶಾಧಿಕಾರಿಯಾಗಿ ಶ್ರೀ ಅಕಿಲೇಶ್ ಮತ್ತು ಜೊತೆ ಕಾರ್ಯದರ್ಶಿಯಾಗಿ ಶ್ರೀ ರಮಿತ್ ಶೆಟ್ಟಿ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಅಧಿಕಾರ ಸ್ವೀಕರಿಸಿದ ಎಲ್ಲಾ ಪದಾಧಿಕಾರಿಗಳಿಗೆ ಟ್ರಸ್ಟ್‌ನ ಸದಸ್ಯರು ಹಾಗೂ ಹಿತೈಷಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ಟ್ರಸ್ಟ್‌ನ ನೇತೃತ್ವದಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಇನ್ನಷ್ಟು ಯಶಸ್ವಿಯಾಗಿ ಮೂಡಿಬರಲಿ ಎಂದು ಸಾರ್ವಜನಿಕರು ಮತ್ತು ಹಿತಚಿಂತಕರು ಶುಭ ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ