ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ದೇರೆಬೈಲ್ ಪಶ್ಚಿಮ ವಾರ್ಡ್‌ನ ಅಶೋಕನಗರ ಆಯುರ್ವೇದಿಕ್ ಕಾಲೇಜು ರಸ್ತೆ ಮತ್ತು ಅಶೋಕನಗರ ಜಂಕ್ಷನ್‌ನ ಬಲ ಬದಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ 30 ಲಕ್ಷ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ರಸ್ತೆಯ ಅಭಿವೃದ್ಧಿಯು ಗುಣಮಟ್ಟದಿಂದ ಕೂಡಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಕಾಮಗಾರಿ ನಡೆಯುವ ಅವಧಿಯಲ್ಲಿ ಸ್ಥಳೀಯರು ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ ಜಯಲಕ್ಷ್ಮಿ ಬಿ. ಶೆಟ್ಟಿ, ಗಣೇಶ್ ಕುಲಾಲ್, ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಶಕ್ತಿ ಕೇಂದ್ರದ ಅಧ್ಯಕ್ಷ ಉಮೇಶ್, ಪ್ರಮುಖರಾದ ಅಮಿತ್, ಸುರೇಖಾ, ಪ್ರವೀಣ್ ನಿಡ್ಡೇಲ್, ವರದ, ನರೇಶ್, ಶ್ರೀಕಾಂತ್, ಸಂತೋಷ್, ಪ್ರಕಾಶ್, ದೀಕ್ಷಿತ್, ಸೌಮ್ಯ, ಸವಿತಾ ಸೇರಿದಂತೆ ಸ್ಥಳೀಯರು, ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.