image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಭೇಟಿ

ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಜೂನ್ 24, 2026 ರಂದು ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಭೇಟಿ ನೀಡಿದರು.

​ಈ ಭೇಟಿಯ ಸಂದರ್ಭದಲ್ಲಿ, ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳನ್ನು ವೀಕ್ಷಿಸಿ, ಅಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಸಿಬ್ಬಂದಿಗಳ ಕಾರ್ಯನಿಷ್ಠೆ ಮತ್ತು ಸೇವಾ ಮನೋಭಾವವನ್ನು ಮೆಚ್ಚಿ ಶ್ಲಾಘಿಸಿದ ಅವರು, ಎಲ್ಲರಿಗೂ ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು, ಹೆಗ್ಗಡೆ ದಂಪತಿಗಳನ್ನು ಹಾಗೂ ಅವರ ಮೊಮ್ಮಗಳಾದ ಕುಮಾರಿ ಮಾನ್ಯ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

​ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಅತ್ಯಾಧುನಿಕ ಸೌಲಭ್ಯಗಳಿರುವ ನೂತನ ಕಟ್ಟಡವನ್ನು ನಿರ್ಮಿಸಿ, ಸಿಬ್ಬಂದಿಗಳ ಅಭಿವೃದ್ಧಿಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆಯವರಿಗೆ ಈ ವೇಳೆ ಕೃತಜ್ಞತೆ ಸಲ್ಲಿಸಲಾಯಿತು. ಸಂಸ್ಥೆಯ ವತಿಯಿಂದ ಗಣ್ಯರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸೇಲಂ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿ, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ