ಮೂಡುಬಿದಿರೆ : ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಬಿ.ಕಾಂ. ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್‌ಸ್ಟನ್ ವಾಸ್ (355 ಅಂಕಗಳು), ಶೆಟ್ಟಿ ರಾಹುಲ್ ಉಮೇಶ್ (313 ಅಂಕಗಳು), ಎನ್. ಚಿರಂತನಾ (312 ಅಂಕಗಳು) ಹಾಗೂ ರೋಹಿತ್ ಪೂಜಾರಿ (304 ಅಂಕಗಳು) ಅವರು ಗ್ರೂಪ್-01 ಮತ್ತು ಗ್ರೂಪ್-02 ಎರಡೂ ವಿಭಾಗಗಳಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ.
ಇನ್ನುಳಿದಂತೆ ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್ (164), ಸಾನಿಯಾ (150), ಪ್ರಸಿದ್ಧ್ ಪೂಜಾರಿ (150), ಮೋನಿಶಾ ಕುಂದರ್ (163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ (150) ಅತ್ಯುತ್ತಮವಾಗಿ ಪರೀಕ್ಷೆ ಎದುರಿಸಿ ಉತ್ತೀರ್ಣರಾಗಿದ್ದಾರೆ. ಹಾಗೆಯೇ ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಮತ್ತು ತರುಣ್ ಕುಮಾರ್ (152) ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ. ಕಠಿಣವಾದ ಈ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಯಶಸ್ಸು ಕಂಡು, ಕಾಲೇಜಿಗೆ ಹೆಮ್ಮೆ ತಂದಿರುವ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.