image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮತದಾರರ ಪಟ್ಟಿ ಪರಿಷ್ಕರಣೆ: ಕಾಂಗ್ರೆಸ್ ಸಭೆ

ಮತದಾರರ ಪಟ್ಟಿ ಪರಿಷ್ಕರಣೆ: ಕಾಂಗ್ರೆಸ್ ಸಭೆ

ಮಂಗಳೂರು : ಮಂಗಳೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ರಮದ ಪೂರ್ವಭಾವಿ ತಯಾರಿಯಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಹಾಗೂ ಬ್ಲಾಕ್ ಅಧ್ಯಕ್ಷರ ಪ್ರಮುಖ ಸಭೆ ಜರುಗಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ಅವರು, ಮುಂದಿನ ಮೂರು ತಿಂಗಳಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳು (BLO) ನೀಡುವ ಫಾರ್ಮ್‌ಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ, ಬಿಜೆಪಿ ಸರ್ಕಾರವು ರಾಜಕೀಯ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಐವನ್ ಡಿ'ಸೋಜಾ ತೀವ್ರವಾಗಿ ಖಂಡಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್ ಅವರು ಮಾತನಾಡಿ, ವಾರ್ಡ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಜಾಗೃತಿ ಮೂಡಿಸಬೇಕಾದ ಅಗತ್ಯವನ್ನು ಒತ್ತಿಹೇಳಿದರು. ಸಭೆಯಲ್ಲಿ ಅಶೋಕ್ ಡಿ.ಕೆ., ನವೀನ್ ಡಿ'ಸೋಜಾ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ