image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಹಕಾರ ಕ್ಷೇತ್ರ ದೇಶದ ಅಭಿವೃದ್ಧಿಗೆ ನಿರಂತರವಾಗಿ ಮಹತ್ವದ ಕೊಡುಗೆ ನೀಡುತ್ತಾ ಬಂದಿದ್ದು, ಸಹಕಾರ ತತ್ವದೊಂದಿಗೆ ಅಭಿವೃದ್ಧಿಯತ್ತ ಸಾಗಬೇಕು - ಎಂ.ಎನ್. ರಾಜೇಂದ್ರ ಕುಮಾರ್

ಸಹಕಾರ ಕ್ಷೇತ್ರ ದೇಶದ ಅಭಿವೃದ್ಧಿಗೆ ನಿರಂತರವಾಗಿ ಮಹತ್ವದ ಕೊಡುಗೆ ನೀಡುತ್ತಾ ಬಂದಿದ್ದು, ಸಹಕಾರ ತತ್ವದೊಂದಿಗೆ ಅಭಿವೃದ್ಧಿಯತ್ತ ಸಾಗಬೇಕು - ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ನಗರದಲ್ಲಿ ನಡೆದ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಸಹಕಾರ ಕ್ಷೇತ್ರವು ದೇಶದ ಅಭಿವೃದ್ಧಿಗೆ ನಿರಂತರವಾಗಿ ಮಹತ್ವದ ಕೊಡುಗೆ ನೀಡುತ್ತಾ ಬಂದಿದೆ ಎಂದು ತಿಳಿಸಿದರು. "ಸಹಕಾರದಿಂದ ಸಮೃದ್ಧಿ" ಎಂಬ ಧ್ಯೇಯದೊಂದಿಗೆ ದೇಶದಲ್ಲಿಯೇ ಪ್ರಥಮ ಬಾರಿಗೆ ಈ ವಿಶೇಷ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಸಹಕಾರ ತತ್ವದೊಂದಿಗೆ ಅಭಿವೃದ್ಧಿಯತ್ತ ಸಾಗುವಂತೆ ಅವರು ಕರೆ ನೀಡಿದರು. ರಾಜ್ಯದಲ್ಲಿ 47 ಸಾವಿರಕ್ಕೂ ಅಧಿಕ ಸಹಕಾರ ಸಂಘಗಳಿದ್ದು, ದೇಶದಲ್ಲಿ ಮೂವತ್ತು ಕೋಟಿಗೂ ಅಧಿಕ ಮಂದಿ ಸಹಕಾರ ಸಂಘದ ಸದಸ್ಯರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮದ ಧ್ವಜಾರೋಹಣವನ್ನು ನೆರವೇರಿಸಿದ ಶಾಸಕ ವೇದವ್ಯಾಸ ಡಿ. ಕಾಮತ್ ಮಾತನಾಡಿ, ಭಾರತೀಯರ ಜೀವನ ಪದ್ಧತಿಯಲ್ಲಿ ಸಹಕಾರ ತತ್ವ ಅಡಗಿದೆ ಮತ್ತು ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಯಶಸ್ಸಿಗೆ ಸಹಕಾರ ಕ್ಷೇತ್ರದ ಬೆಳವಣಿಗೆಯ ಗುರಿ ಇದೆ ಎಂದು ಶುಭ ಹಾರೈಸಿದರು. ದ. ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಮಾತನಾಡಿ, ಸಹಕಾರಿ ರಂಗವು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಗ್ರಾಹಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಬೇಕೆಂದು ಆಶಿಸಿದರು. ದ. ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್ ಮಾತನಾಡಿ, ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ 5 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ಸಪ್ತಾಹ ಮಹತ್ವದ್ದಾಗಿದೆ ಎಂದರು.

ವಿಶ್ವ ಕರ್ಮ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹರೀಶ್ ಆಚಾರ್ಯ ಮಾತನಾಡಿ, ದ. ಕ. ಜಿಲ್ಲಾ ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾಯರ ಮೂಲಕ ಈ ಕ್ಷೇತ್ರ ಹುಟ್ಟಿ ಬೆಳೆದು ದೇಶಾದ್ಯಂತ ವಿಸ್ತರಿಸಿದೆ ಎಂದು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕ ಜಯಕರ್ ಶೆಟ್ಟಿ ಬಿ. ಇಂದ್ರಳಿ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು ಇದರ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದ. ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ವಿ. ಹಿರೇಮಠ, ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ದೇವಿ ಪ್ರಸಾದ್ ಶೆಟ್ಟಿ ಭಾಸ್ಕರ್ ಎಸ್. ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಜೈರಾಜ್ ಬಿ. ರೈ, ಮೋನಪ್ಪ ಶೆಟ್ಟಿ ಎಕ್ಕಾರು, ವಾದಿರಾಜ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ