image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜುಲೈ 5ರಂದು ಕುದ್ಮುಲ್ ರಂಗರಾವ್ ಜಯಂತಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಮತ್ತು ಅಭಿನಂದನಾ ಸಮಾರಂಭ

ಜುಲೈ 5ರಂದು ಕುದ್ಮುಲ್ ರಂಗರಾವ್ ಜಯಂತಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಮತ್ತು ಅಭಿನಂದನಾ ಸಮಾರಂಭ

ಮಂಗಳೂರು: ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ, ದಲಿತೋದ್ಧಾರದ ಮುಂಚೂಣಿ ನಾಯಕ ಹಾಗೂ ಸಾಮಾಜಿಕ ಸಮಾನತೆಯ ಚಿಂತಕರಾಗಿದ್ದ  ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಜುಲೈ 5ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್‌ಗಳನ್ನು ವಿತರಿಸಲಾಗುವುದು ಮತ್ತು ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಪಾಲ್ ಗೌತಮ್, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯರಾದ ಜಕ್ಕಪ್ಪ ಹಾಗೂ ಪಿ.ವಿ. ಮೋಹನ್ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು, ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಕುದ್ಮುಲ್ ರಂಗರಾವ್ ಅವರ ಆದರ್ಶಗಳನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮವು ಸಮಾಜದ ಸಬಲೀಕರಣಕ್ಕೆ ವೇದಿಕೆಯಾಗಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ಅಧ್ಯಕ್ಷ ದಿನೇಶ್ ಮೂಳೂರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೂಚನೆ: ಉಚಿತ ಕಾಲೇಜು ಬ್ಯಾಗ್ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಆಯಾ ಬ್ಲಾಕ್ ಅಧ್ಯಕ್ಷರಲ್ಲಿ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Category
ಕರಾವಳಿ ತರಂಗಿಣಿ