image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಜುಲೈ 4ರಂದು ಪ್ರತಿಭಾ ಪುರಸ್ಕಾರ

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಜುಲೈ 4ರಂದು ಪ್ರತಿಭಾ ಪುರಸ್ಕಾರ

ಮಂಗಳೂರು: ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್‌ ಅವರ ಸ್ಮರಣಾರ್ಥವಾಗಿ ಜುಲೈ 4ರಂದು ಅಪರಾಹ್ನ 3.00 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. 2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಸಮಾರಂಭದಲ್ಲಿ ವಿದ್ಯಾರ್ಥಿವೇತನ ವಿತರಿಸಲಾಗುವುದು. ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕರಾದ ಶ್ರೀ ಕೃಷ್ಣ ಜೆ. ಪಾಲೇಮಾರ್ ಅವರು ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವ ಪುರಸ್ಕಾರ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Category
ಕರಾವಳಿ ತರಂಗಿಣಿ