image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರ: ನಗರದ ಬಂಗ್ರಕೂಳೂರಿನಲ್ಲಿ ಇಂದು ಸಂಜೆ 6:20ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ತೋಕೂರು ನಿವಾಸಿ ಸದಾನಂದ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂಗ್ರಕೂಳೂರಿನ ವಿ.ಆರ್.ಎಲ್. ಮುಂಭಾಗ ಸಂಚರಿಸುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಲಾರಿಯೊಂದು ಓವರ್‌ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಸದಾನಂದ ಅವರ ಹೆಲ್ಮೆಟ್ ಕಳಚಿ ಬಿದ್ದಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
​ಈ ಅವಘಾತಕ್ಕೆ ಲಾರಿ ಚಾಲಕ ಅಜರುದ್ದಿನ್ ನ ನಿರ್ಲಕ್ಷವೇ ಕಾರಣ ಎಂದು ಪೋಲಿಸ್ ಮೂಲಗಳು ತಿಳಿಸಿದೆ.

Category
ಕರಾವಳಿ ತರಂಗಿಣಿ