image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿ ಪರಿಸರ ಸಂರಕ್ಷಣೆಗೆ ‘ಹಸಿರು ಸಂವಾದ’ಕ್ಕೆ ಚಾಲನೆ

ಕರಾವಳಿ ಪರಿಸರ ಸಂರಕ್ಷಣೆಗೆ ‘ಹಸಿರು ಸಂವಾದ’ಕ್ಕೆ ಚಾಲನೆ

ಮೂಡಬಿದಿರೆ : ಕರಾವಳಿ ಕರ್ನಾಟಕದಲ್ಲಿ ವೈಜ್ಞಾನಿಕ ಹಾಗೂ ಶಾಶ್ವತ ತ್ಯಾಜ್ಯ ನಿರ್ವಹಣೆಗೆ ಹೊಸ ಮಾದರಿಯನ್ನು ರೂಪಿಸುವ ಉದ್ದೇಶದಿಂದ ‘ಹಸಿರು ಸಂವಾದ’ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನವು ಕರಾವಳಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯ, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಆಡಳಿತ ಮತ್ತು ತಜ್ಞರನ್ನು ಒಂದೇ ವೇದಿಕೆಗೆ ತರುವ ಮಹತ್ವದ ಹೆಜ್ಜೆಯಾಗಿದೆ.

ಈ ವೈಜ್ಞಾನಿಕ ಅಧಿವೇಶನಗಳಲ್ಲಿ ಪರಿಸರ ವಿಜ್ಞಾನಿಗಳು, ತಜ್ಞರು ಮತ್ತು ಪರಿಸರ ಹೋರಾಟಗಾರರು ಭಾಗವಹಿಸಲಿದ್ದು, ಸ್ಥಳೀಯ ಮಟ್ಟದ ಯಶಸ್ವಿ ಮಾದರಿಗಳನ್ನು ರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳೊಂದಿಗೆ ಸಂಪರ್ಕಿಸುವ ವೇದಿಕೆಯಾಗಿ ಇದು ಕಾರ್ಯನಿರ್ವಹಿಸಲಿದೆ. ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ನದಿಗಳಿಗೆ ಸೇರದಂತೆ ಅತ್ಯಂತ ಪರಿಣಾಮಕಾರಿಯಾಗಿ ತಡೆಗಟ್ಟಿದ ಗ್ರಾಮಕ್ಕೆ ಪ್ರತಿಷ್ಠಿತ ‘ಸ್ವಚ್ಛ ಗ್ರಾಮ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುವುದು. ಇದರೊಂದಿಗೆ ಉತ್ತಮ ಸಾಧನೆ ತೋರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಿಸರ ಪ್ರಶಸ್ತಿಗಳಿಗೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ‘ವೇಸ್ಟ್ ವಾರಿಯರ್ಸ್’, ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಪರ್ಧೆಗಳ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪರ್ಯಾವರಣ ಸಂರಕ್ಷಣಾ ತಂಡದ ಜಯರಾಮ್ ಬೊಳ್ಳಾಜೆ, ಹೊಸದಿಂಗತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಪರಿಸರ ವಿಜ್ಞಾನಿ ಡಾ. ಬಿನಿಷಾ ಪಿ., ಘನ ತ್ಯಾಜ್ಯ ನಿರ್ವಹಣಾ ತಜ್ಞ ಹಾಗೂ ‘ಫ್ರೆಂಡ್ಸ್ ಆಫ್ ಲೇಕ್ಸ್’ ಸಂಸ್ಥೆಯ ಸಂಸ್ಥಾಪಕ ರಾಮಪ್ರಸಾದ್ ಮತ್ತು ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಅರ್ಜುನ ಕುಮಾರ್ ಉಪಸ್ಥಿತರಿದ್ದರು. ಹಸಿರು ಸಂವಾದ ಅಭಿಯಾನದ ಮಂಜುನಾಥ್ ಸ್ವಾಗತಿಸಿದರೆ, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ