ಮಂಗಳೂರು: ಸಂಗೀತ ಭಾರತಿ ಫೌಂಡೇಶನ್ (ರಿ) ವತಿಯಿಂದ ಜುಲೈ 12, 2026 ರಂದು ಸಂಜೆ 5:30 ಕ್ಕೆ ಮಂಗಳೂರಿನ ಪುರಭವನದಲ್ಲಿ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ಸಿತಾರ್ ವಾದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಸಿತಾರ್ ವಾದಕ ಉಸ್ತಾದ್ ಶಾಹಿದ್ ಪರ್ವೇಜ್ ಅವರು ಭಾಗವಹಿಸಲಿದ್ದಾರೆ ಎಂದು ಸಂಗೀತ ಭಾರತಿ ಫೌಂಡೇಶನ್‌ನ ಅಧ್ಯಕ್ಷರಾದ ಶ್ರೀ ನರೇಂದ್ರ ಎಲ್. ನಾಯಕ್ ಎಂದು ಮಾಹಿತಿ ನೀಡಿದರು. ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ವತಿಯಿಂದ ಕೋರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಶ್ರೀ ಶಶಿಧರ್ ರಾವ್, ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅಂಕಿತ ಎಲ್. ನಾಯಕ್ ಮತ್ತು ಟ್ರಸ್ಟಿ ಶ್ರೀ ಮುರಳೀಧರ್ ಜಿ. ಅವರು ಉಪಸ್ಥಿತರಿದ್ದರು.