ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಇಂದು ಮತ್ತು ನಾಳೆ ಸಂಜೆ 6:30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಕನ್ನಡ ಗಾನ ಗುಚ್ಛ’ ಎಂಬ ವಿನೂತನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ಪ್ರಸಿದ್ಧ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಅವರು ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು, ಕಲಾಭಿಮಾನಿಗಳಿಗೆ ಹೊಸ ಅನುಭವ ನೀಡಲಿದೆ. ಈ ತಂಡದಲ್ಲಿ ಡಾ. ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಸೇರಿದಂತೆ ಹಲವು ಕಲಾವಿದರು ಭಾಗವಹಿಸಿ ಪ್ರದರ್ಶನ ನೀಡಲಿದ್ದಾರೆ. ಈ ಬಾರಿ ಯಾವುದೇ ಔಪಚಾರಿಕ ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮವು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.