image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಣಿಪಾಲ ಶಾಲಾ ಬಸ್ ಅಪಘಾತ; ಆಸ್ಪತ್ರೆಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಮಣಿಪಾಲ ಶಾಲಾ ಬಸ್ ಅಪಘಾತ; ಆಸ್ಪತ್ರೆಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಮಣಿಪಾಲ : ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಶಾಲಾ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಹಾಗೂ ಅವರ ಪೋಷಕರಿಂದ ಮಾಹಿತಿ ಪಡೆದು, ಧೈರ್ಯ ತುಂಬಿದರು.

ಕಳೆದ ಕೇವಲ ಒಂದು ತಿಂಗಳ ಅವಧಿಯಲ್ಲಿ ಉಡುಪಿ ನಗರ ಭಾಗದಲ್ಲಿ ಈಗಾಗಲೇ 3 ಶಾಲಾ ಬಸ್ ಅಪಘಾತ ಪ್ರಕರಣಗಳು ವರದಿಯಾಗಿರುವುದು ತೀವ್ರ ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರು ಶಾಲಾ ವಾಹನಗಳ ಸುರಕ್ಷತಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಲು ವಿಶೇಷ ಆದ್ಯತೆ ನೀಡಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕರ ಆಸ್ಪತ್ರೆ ಭೇಟಿಯ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಕಾರ್ಯದರ್ಶಿ ಗುರುರಾಜ್ ಭಂಡಾರಿ, ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀವತ್ಸ ಹಾಗೂ ಪದಾಧಿಕಾರಿ ನಿತಿನ್ ಪೈ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ