image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಮತ್ತು ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ.

ಮಂಗಳೂರು ಮತ್ತು ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ.

ಮಂಗಳೂರು: ನಗರದಲ್ಲಿ ನಡೆಯುವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಮಾಹಿತಿ ನೀಡಿದರು.

ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,19 ನೇ ಜುಲೈ ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೊಂದಾವಣೆ ಮಾಡಿದ್ದಾರೆ. ಹಿಂದಿನ ದಿನವೇ ಹೆಚ್ಚು ಜನರು ಬರುವುದರಿಂದ ಕವಿ ಗೋಷ್ಟಿ ಬೆಳಗ್ಗೆ 8 ಗಂಟೆಗೆ ಖ್ಯಾತ ರಂಗಭೂಮಿ ತರಭೆತುದಾರ, ಕವಿ, ಕೊಂಕಣಿ ಶಿಕ್ಷಕ ಗೋವಾ ಕಾಣಕೋಣದ ಗೌರೀಶ ವರ್ಣೇಕರ್ ಚಾಲನೆ ಮಾಡಲಿದ್ದಾರೆ.
ಉದ್ಘಾಟನೆ ಬೆಳಗ್ಗೆ ಹತ್ತು ಗಂಟೆಗೆ ಮಂಗಳೂರಿನ ಜಿಲ್ಲಾ ಪ್ರಧಾನ ನ್ಯಾಯವಾದಿ ಆಭಿಯೋಜಕ ಎಂಪಿ ನೊರೊನಾ ಅವರಿಂದ ನಡೆಯಲಿದೆ. ಮುಖ್ಯ ಅತಿಥಿ ಉದ್ಯಮಿ ವಿನ್ಸೆಂಟ್ ಕುತಿನೊ ಇರುತ್ತಾರೆ.
ನಂತರ ಮತ್ತೆ ಕವಿಗೋಷ್ಟಿ ಮುಂದುವರಿಯಲಿದೆ.
ಮಧ್ಯಾಹ್ನದ ನಂತರ ವಿದ್ಯಾರ್ಥಿ ಹಾಗೂ ಕವಿಗಳು ಮುಕ್ತವಾಗಿ ಸಾಹಿತ್ಯ, ಕವಿತೆ ಬಗ್ಗೆ ಸಂವಾದ ಒಪನ್ ಹೌಸ್ ನಡೆಸಲಿದ್ದಾರೆ.

ಸಮಾರೋಪ ಭಾಷಣ ಗೋವಾದ ಪ್ರಕಾಶಕಿ ಹಾಗೂ ಕೊಂಕಣಿ ಮಾತೃಭಾಷೆ ಶಿಕ್ಷಕಿ ಯೊಗಿತಾ ವರ್ಣೇಕರ್ ಮಾಡಲಿದ್ದಾರೆ.
ಅತಿಥಿಗಳಾಗಿ ಶ್ರೀನಿವಾಸ ನಾಯಕ್ ಇಂದಾಜೆ, ಎಲಿಯಾಸ್ ಫೆರ್ನಾಂಡಿಸ್ ಇರಲಿದ್ದಾರೆ. ಎರಡನೆಯ ಮತ್ತು ನಾಲ್ಕನೇಯ ಸಮ್ಮೇಳನಗಳು ಗೋವಾದ ಪಣಜಿಯಲ್ಲಿ ನಡೆದಿದ್ದವು.
ಮೊದಲ ಮತ್ತು ಮೂರನೆಯ ಸಮ್ಮೇಳಗಳು ಮಂಗಳೂರು ನಡೆದಿದ್ದವು.

ಸಮ್ಮೇಳನದ ಅಯೋಜನೆಯ ಗುರ್ಕಾರ್ ಗೌರೀಶ ವರ್ಣೇಕರ್ ಮಡ್ಗಾಂವ್ ಗೋವಾ ಮತ್ತು ಸಮಿತಿ ಸದಸ್ಯರು ಕೇರಳದ ವಿಜಯ್ ಪೈ, ಕರ್ನಾಟಕ ಕಾರವಾರದ ಸಂದೇಶ ಬಾಂದೇಕರ್, ಗೋವಾದ ಆನ್ನಿ ಫರ್ನಾಂಡೀಸ್ ತೀವಿಮ್ ಗೋವಾ, ಪಣಜಿ ಗೋವಾದ ಅನಗಾ ಕಾಮತ್, ದೆಹಲಿಯ ಗೋಪಾಲಕೃಷ್ಣ ಪ್ರಭು, ಕರ್ನಾಟಕ ಬೆಂಗಳೂರಿನ ಜಾನೆಟ್ ವಾಸ್ ಆಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಐದನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುವ ರೇಮಂಡ್ ಡಿಕುನಾ ತಾಕೊಡೆ, ಸಮ್ಮೇಳನದ ಅಯೋಜನಾ ಸಮಿತಿಯ ಕಾರ್ಯದರ್ಶಿ ರಿಯಾನ ಡಿಕುನಾ, ಮಾದ್ಯಮ ಸಲಹೆಗಾರ ಎಲಿಯಾಸ್ ಫೆರ್ನಾಂಡೀಸ್, ಕಾರ್ಯಕಾರಿ ಸದಸ್ಯ ಸ್ಟೇನಿ ತಾವ್ರೊ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ