image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರು ಹೆಚ್ಚಾಗಿರುವಂತಹ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ.

ಅಕ್ಟೋಬ‌ರ್ 15ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಅಕ್ಟೋಬ‌ರ್ 16ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ. ಅಕ್ಟೋಬರ್ 19ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ