image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿ ಎ ಪರೀಕ್ಷೆ: ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಾಧನೆ

ಸಿ ಎ ಪರೀಕ್ಷೆ: ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಾಧನೆ

ಪುತ್ತೂರು : ಇನ್ಸಿಟ್ಯೂಟ್ ಆಫ್ ಚಾರ್ಟಡ್್ರ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಇತ್ತೀಚೆಗೆ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಸಹನ ಮಳಿ ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಉತ್ತೀರ್ಣರಾದ ಸಹನ ಮಳಿ ಅವರು ಪುತ್ತೂರು ತಾಲೂಕಿನ ಮಡೂರಿನ ನಿವಾಸಿಗಳಾದ ವೆಂಕಟಕೃಷ್ಣ ಎಮ್.ಎನ್ ಹಾಗೂ ವೀಣಾ ಸರಸ್ವತಿ ದಂಪತಿಗಳ ಪುತ್ರಿಯಾಗಿದ್ದಾರೆ. ಕಠಿಣ ಶ್ರಮದ ಮೂಲಕ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಪ್ರೀತಿಪೂರ್ವಕವಾಗಿ ಅಭಿನಂದಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

Category
ಕರಾವಳಿ ತರಂಗಿಣಿ