image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ: ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಬಿಜೆಪಿ ಯುವಮೋರ್ಚಾ ಆಗ್ರಹ

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ: ವಿಶೇಷ ಟಾಸ್ಕ್ ಫೋರ್ಸ್ ರಚನೆಗೆ ಬಿಜೆಪಿ ಯುವಮೋರ್ಚಾ ಆಗ್ರಹ

ಮಂಗಳೂರು : ಸುರತ್ಕಲ್ ಸಮೀಪದ ಮುಕ್ಕದಲ್ಲಿ ಎಂಟು ಮಂದಿ ಹಾಗೂ ಕೊಡಿಕಲ್ ಪ್ರದೇಶದಲ್ಲಿ ಹನ್ನೊಂದು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಯಶಸ್ವಿಯಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿರುವ ಮಂಗಳೂರು ನಗರ ಪೊಲೀಸ್ ಇಲಾಖೆಯ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಈ ಯಶಸ್ವಿ ಕಾರ್ಯಾಚರಣೆಗಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಹಾಗೂ ಅವರ ತಂಡಕ್ಕೆ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಅಕ್ರಮ ವಲಸೆಯನ್ನು ತಡೆಗಟ್ಟುವುದು ಅತ್ಯಂತ ಪ್ರಮುಖ ಆದ್ಯತೆಯಾಗಬೇಕಿದೆ. ನಗರದ ಕಟ್ಟಡ ನಿರ್ಮಾಣ ಕ್ಷೇತ್ರ, ವಿವಿಧ ಕಾರ್ಮಿಕ ವಲಯಗಳು ಸೇರಿದಂತೆ ಹಲವು ಆಯಕಟ್ಟಿನ ಸ್ಥಳಗಳಲ್ಲಿ ಇನ್ನೂ ಅನೇಕ ಅಕ್ರಮ ವಲಸಿಗರು ನೆಲೆಸಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಮಾಹಿತಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೇವಲ ಈ ಕಾರ್ಯಾಚರಣೆಗೆ ಸೀಮಿತವಾಗದೆ, ಆಡಳಿತಾಧಿಕಾರಿಗಳು ತಕ್ಷಣವೇ ವಿಶೇಷ ಟಾಸ್ಕ್ ಫೋರ್ಸ್ (ವಿಶೇಷ ಕಾರ್ಯಪಡೆ) ರಚಿಸಿ ನಗರದಾದ್ಯಂತ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಂತಹ ದೇಶದ್ರೋಹಿ ಮತ್ತು ಅಕ್ರಮ ವಲಸೆಯ ಜಾಲವನ್ನು ಮಟ್ಟಹಾಕಲು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಪ್ರಜ್ಞಾವಂತ ಸಾರ್ವಜನಿಕರು ಒಟ್ಟಾಗಿ ನಿರಂತರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ