image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ಜುಲೈ 16 ರಿಂದ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳದಲ್ಲಿ ಜುಲೈ 16 ರಿಂದ 55ನೇ ವರ್ಷದ ಪುರಾಣ ವಾಚನ-ಪ್ರವಚನ

ಧರ್ಮಸ್ಥಳ : ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 17ರ ವರೆಗೆ ಜರುಗಲಿದೆ ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ. ದೇವಸ್ಥಾನದ ಎದುರಿಗಿರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ 6.30 ರಿಂದ 8 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರು ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡಲಿದ್ದಾರೆ. ಶನಿವಾರ ಮತ್ತು ಭಾನುವಾರಗಳಂದು ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು. ಜುಲೈ 16 ಹಾಗೂ 17 ರಂದು ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸಲಿದ್ದಾರೆ. ಜುಲೈ 16 ರಂದು ಸಂಜೆ 5 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Category
ಕರಾವಳಿ ತರಂಗಿಣಿ