image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್‌ಐಆರ್ ಅಭಿಯಾನದ ಪ್ರಗತಿ ಪರಿಶೀಲಿಸಿದ ಶಾಸಕ ವೇದವ್ಯಾಸ ಕಾಮತ್

ಎಸ್‌ಐಆರ್ ಅಭಿಯಾನದ ಪ್ರಗತಿ ಪರಿಶೀಲಿಸಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಈ ಕುರಿತು ಮಹಾ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲ ವ್ಯಾಪ್ತಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಕ್ಷಿಣ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 48ರ ಕಂಕನಾಡಿ ವೆಲೆನ್ಸಿಯಾದ ಬೂತ್ ಸಂಖ್ಯೆ 187ರಲ್ಲಿ ಕಾರ್ಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಎಸ್‌ಐಆರ್ ಅಭಿಯಾನದ ಮಹತ್ವ ಹಾಗೂ ಉದ್ದೇಶದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಎಲ್ಲಾ ಮತದಾರರು ಭರ್ತಿ ಮಾಡಿದ ಎನ್ಯುಮರೇಷನ್ ಫಾರಂಗಳನ್ನು ಅಂತಿಮ ದಿನಾಂಕದ ವರೆಗೆ ಕಾಯದೇ ಶೀಘ್ರವಾಗಿ ಸಲ್ಲಿಸಬೇಕು. ಫಾರಂ ಭರ್ತಿ ಮಾಡುವಲ್ಲಿ ಯಾವುದೇ ಸಮಸ್ಯೆಗಳಿದ್ದರೆ, ಪಕ್ಷದ ಏಜೆಂಟರ ಸಹಾಯವನ್ನು ಪಡೆಯಬಹುದು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ವೇಳೆ ನಿಕಟಪೂರ್ವ ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರವೀಣ್ ನಿಡ್ಡೇಲ್, ಶಕ್ತಿ ಕೇಂದ್ರ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ, ಬಿಜೆಪಿ ಪ್ರಮುಖರಾದ ಕೃತಿಕ್ ಉಜ್ಜೋಡಿ, ರೂಪಾ, ದಯಾನಂದ, ರಾಮಚಂದ್ರ, ಗೀತಾ ಮೊದಲಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ