image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸ್ವಯಂ ಉದ್ಯೋಗಕ್ಕೆ ಕೌಶಲ್ಯವೇ ಬುನಾದಿ: ಕೆ. ಎನ್‌. ಜನಾರ್ದನ್

ಸ್ವಯಂ ಉದ್ಯೋಗಕ್ಕೆ ಕೌಶಲ್ಯವೇ ಬುನಾದಿ: ಕೆ. ಎನ್‌. ಜನಾರ್ದನ್

ಉಜಿರೆ : ಇಲ್ಲಿನ ರುಡ್‌ಸೆಟ್ (RUDSETI) ಸಂಸ್ಥೆಯಲ್ಲಿ ಇತ್ತೀಚೆಗೆ ಬ್ಯೂಟಿ ಪಾರ್ಲರ್, ಕಂಪ್ಯೂಟರ್ ಟೈಪಿಂಗ್ ಹಾಗೂ ಸಿ.ಸಿ. ಕ್ಯಾಮೆರಾ ಅಳವಡಿಕೆ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ದೀಕ್ಷಾಂತ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ 'ಸಿರಿ' ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್‌. ಜನಾರ್ದನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕೌಶಲ್ಯವೃದ್ಧಿ, ಉದ್ಯೋಗ ಹಾಗೂ ಉದ್ಯಮಶೀಲತೆಯ ಮಹತ್ವವನ್ನು ವಿವರಿಸಿದರು. ತರಬೇತಿಯ ಮೂಲಕ ಪಡೆದ ಜ್ಞಾನವನ್ನು ಸರಿಯಾಗಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳಿಗೆ ಪರಿವರ್ತಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುಧೀರ್ ಜಿ. ನಾಯಕ್ ಅವರು ಮಾತನಾಡಿ, ಸಂಸ್ಥೆಯು ಗ್ರಾಮೀಣ ಯುವಜನತೆ ಹಾಗೂ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅನಸೂಯ ಜೈನ್ ಹಾಗೂ ಕೆ. ಶರತ್ ಜೈನ್ ಉಪಸ್ಥಿತರಿದ್ದು, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಾಶಯ ಕೋರಿದರು. ಇದೇ ವೇಳೆ ಶಿಬಿರಾರ್ಥಿಗಳು ತಮ್ಮ ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಅನಿಸಿಕೆ ಮತ್ತು ವಿಷಯಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ತರಬೇತುದಾರರು, ಶಿಬಿರಾರ್ಥಿಗಳು ಹಾಗೂ ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ