image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್

ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್

ಮಂಗಳೂರು:ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೂಡಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಭಿಪ್ರಾಯ ಪಟ್ಟರು.

ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ  ಪ್ರಾಥಮಿಕ ಶಾಲೆಯಲ್ಲಿ   ಕರ್ನಾಟಕ ಅರಣ್ಯ ಇಲಾಖೆ ಮೂಡಬಿದಿರೆ ಉಪ ವಿಭಾಗ ಹಾಗೂ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಯ ವನಸಿರಿ ಇಕೋ ಕ್ಲಬ್ ವತಿಯಿಂದ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳಲ್ಲಿ ಪರಿಸರದ ಕುರಿತು ಜಾಗ್ರತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಹೇಳಿದರು. ಸರಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಎಂಬ ಕೀಳರಿಮೆ ಬೇಡ. ಸರಕಾರಿ ಶಾಲೆಯಲ್ಲಿ ಕಲಿತವರು ಇಂದು ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಉದಾರಹಣೆಗಳು ಇವೆ ಎಂದು ಹೇಳಿದರು.
ಇದೇ ವೇಳೆ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಈ ಸರಕಾರಿ ಶಾಲೆಗೆ ಹಲವು ನೆರವು ನೀಡಿದ ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ  ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ