image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಸ್‌ಡಿಎಂ ಕಾಲೇಜಿನಲ್ಲಿ ‘ಗುರುವಂದನಾ’ ಹಾಗೂ ನಿವೃತ್ತ ಅಧ್ಯಾಪಕರಿಗೆ ಸನ್ಮಾನ

ಮಂಗಳೂರು: ಎಸ್‌ಡಿಎಂ ಕಾಲೇಜಿನಲ್ಲಿ ‘ಗುರುವಂದನಾ’ ಹಾಗೂ ನಿವೃತ್ತ ಅಧ್ಯಾಪಕರಿಗೆ ಸನ್ಮಾನ

ಮಂಗಳೂರು : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಜುಲೈ 25, 2026ರ ಶನಿವಾರದಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ‘ಗುರುವಂದನಾ’ ಹಾಗೂ ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸಂಪನ್ನಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಯುತ ಸಂದೀಪ್ ಬೂದಿಹಾಳ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಪರಂಪರೆಗೆ ಅತ್ಯುನ್ನತ ಸ್ಥಾನವಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುವ ಮಹತ್ವದ ಕುರಿತು ವಿಷಯ ಮಂಡಿಸಿದರು. ಕೆಆರ್‌ಎಂಎಸ್‌ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಅವರು ಸಂಘಟನೆಯ ಹಾದಿ ಹಾಗೂ ಕಾರ್ಯವೈಖರಿಯ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

'ಭಾರತೀಯ ಜ್ಞಾನ ಪರಂಪರೆ' ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರಖ್ಯಾತ ಚಿಂತಕ ಹಾಗೂ ವಾಗ್ಮಿ ಡಾ. ರವೀಂದ್ರ ಅವರು, ಇಂದಿನ ಯುವ ಸಮುದಾಯಕ್ಕೆ ಭಾರತೀಯ ಜ್ಞಾನ ಪರಂಪರೆಯ ಮಹತ್ವ ತಿಳಿಸಿಕೊಡುವ ಅಗತ್ಯವಿದೆ ಎಂದರು. ಆಧುನಿಕ ಸಂದರ್ಭದಲ್ಲಿ ಅಧ್ಯಾಪಕರ ಮೇಲಿರುವ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಭಾರತೀಯ ಜ್ಞಾನ ಪರಂಪರೆಯ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಎಂದು ಪ್ರತಿಪಾದಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ. ಭಾನುಪ್ರಕಾಶ್ ಬಿ.ಇ. ಅವರು ಶಿಕ್ಷಕ ವೃತ್ತಿಯ ಶ್ರೇಷ್ಠತೆಯ ಕುರಿತು ಮಾತನಾಡಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಎಸ್. ಹೆಗ್ಡೆ ಕಾಲೇಜಿನ ದಿನೇಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ. ವಿಶಾಲಾಕ್ಷಿ, ವಿಜಯಾ ಕಾಲೇಜಿನ ವೆಂಕಟೇಶ್ ಭಟ್, ಎಸ್‌ಡಿಎಂ ಕಾಲೇಜಿನ ಪ್ರೊ. ಅರುಣಾ ಪಿ. ಕಾಮತ್ ಹಾಗೂ ಬೆಳಂದೂರು ಕಾಲೇಜಿನ ಶಂಕರ್ ಭಟ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕೆಆರ್‌ಎಂಎಸ್‌ಎಸ್ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಮೇಜರ್ ಡಾ. ಸುಧಾ ಯು. ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದವರನ್ನು ಸ್ವಾಗತಿಸಿದರು. ಶ್ರೀಮತಿ ಗೀತಾ ಜೈನ್, ಕಾಜಲ್ ಹಾಗೂ ಶ್ರುತಿ ಎನ್. ಕಾರ್ಯಕ್ರಮವನ್ನು ಸಂಯೋಜಿಸಿದ್ದು, ಕಾಜಲ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶ್ರುತಿ ಎನ್. ವಂದನಾರ್ಪಣೆ ನೆರವೇರಿಸಿದರು.

 

Category
ಕರಾವಳಿ ತರಂಗಿಣಿ