image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುಳು ಕಾದಂಬರಿ ‘ಯಾತ್ರೆ’ ಲೋಕಾರ್ಪಣೆ

ತುಳು ಕಾದಂಬರಿ ‘ಯಾತ್ರೆ’ ಲೋಕಾರ್ಪಣೆ

ಮೂಡಬಿದಿರೆ: ಡಾ. ಪ್ರಣತಾರ್ತಿ ಹರನ್ ಅವರ ಸಂಕೇತಿ ಮತ್ತು ಕನ್ನಡ ಮೂಲದ 'ಯಾತ್ರೆ' ಕಾದಂಬರಿಯನ್ನು ಡಾ. ವಸಂತಕುಮಾರ ಪೆರ್ಲ ಅವರು ತುಳು ಭಾಷೆಗೆ ಅನುವಾದಿಸಿದ್ದು, ಈ ಕೃತಿಯನ್ನು ಆಳ್ವಾಸ್ ನುಡಿಸಿರಿಯ ಸಿದ್ಧತಾ ಸಭೆಯಲ್ಲಿ ಡಾ. ಎಂ. ಮೋಹನ ಆಳ್ವ ಅವರು ಭಾನುವಾರ ಬಿಡುಗಡೆಗೊಳಿಸಿದರು. ಮೂಡಬಿದಿರೆಯಲ್ಲಿ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಕವಿ ಹಾಗೂ ಸಾಹಿತಿ ಡಾ. ವಸಂತಕುಮಾರ ಪೆರ್ಲ, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪಿ. ಶ್ರೀನಾಥ್, ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್, ಬಂಟ್ವಾಳ ರಾಣಿ ಅಬ್ಬಕ್ಕ ಕೇಂದ್ರದ ಡಾ. ತುಕಾರಾಮ ಪೂಜಾರಿ, ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಡಾ. ಧನಂಜಯ ಕುಂಬ್ಳೆ ಮತ್ತು ವಿಮರ್ಶಕ ಸತ್ಯನಾರಾಯಣ ಮಲ್ಲಿಪಟ್ಟಣ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ