ಮಂಗಳೂರು: ಬಿ.ಸಿ.ರೋಡು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣಾ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಸಂದರ್ಭದಲ್ಲಿ ನೆಲ್ಯಾಡಿ ಭಾಗದಲ್ಲಿ ಉದ್ಭವಿಸಿರುವ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮಗಾರಿಯ ಅಸಮರ್ಪಕ ನಿರ್ವಹಣೆ ಹಾಗೂ ಸ್ಥಳೀಯವಾಗಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ, ಜಿಲ್ಲಾಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಪ್ರಮುಖರಾದ ರವಿಪ್ರಸಾದ್ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸ್ಥಳೀಯ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.