image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್: ವಿವೇಕಾನಂದ ಕಾಲೇಜಿಗೆ ದ್ವಿತೀಯ ಸ್ಥಾನ

ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್: ವಿವೇಕಾನಂದ ಕಾಲೇಜಿಗೆ ದ್ವಿತೀಯ ಸ್ಥಾನ

ಪುತ್ತೂರು : ಅಂಬಿಕಾ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡಗಳು ಭಾಗವಹಿಸಿದ್ದವು. ಈ ಪಂದ್ಯಾಟದಲ್ಲಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ವಿಜೇತ ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಬಿ.ಎಮ್, ಶಿವಕೀರ್ತನ್ ಕೆ, ಮನ್ವಿತ್ ಎನ್ ಹಾಗೂ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಥಮ್ ಕಶ್ಯಪ್ ಕೆ.ಬಿ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದುಕೊಂಡಿತ್ತು. ಸಾಧನೆಗೈದ ಈ ಬಾಲಕರ ತಂಡವನ್ನು ಮತ್ತು ತರಬೇತುದಾರರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ