ಮಂಗಳೂರು : ಬಂಟ್ವಾಳದ ಖ್ಯಾತ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರಾದ ಶ್ರೀ ಅನಿಲ್ ಪಂಡಿತ್ ಬ್ರಹ್ಮರಕೂಟ್ಟು ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿ ತೇಜೋವಧೆ ಮಾಡಲು ಯತ್ನಿಸುತ್ತಿರುವುದನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕವು ಉಗ್ರವಾಗಿ ಖಂಡಿಸಿದೆ.
ಶ್ರೀ ಅನಿಲ್ ಪಂಡಿತ್ ಅವರು ಹಲವು ವರ್ಷಗಳಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ಸೇವಾ ಭಾವನೆಯಿಂದ ನೆರವು ಹಾಗೂ ಪರಿಹಾರ ನೀಡಿ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಆದರೆ, ಅವರ ಧಾರ್ಮಿಕ ಕಾರ್ಯಗಳಿಂದ ವಿಚಲಿತಗೊಂಡಿರುವ ಕೆಲವು ಮತೀಯ ಹಾಗೂ ದೇಶವಿರೋಧಿ ಶಕ್ತಿಗಳು ಜಾಲತಾಣಗಳಲ್ಲಿ ಅನ್ಯಮತೀಯರ ಮೂಲಕ ಅವರ ತೇಜೋವಧೆಗೆ ಯತ್ನಿಸುತ್ತಿವೆ. ಈ ಸಂಬಂಧ ಅನಿಲ್ ಪಂಡಿತ್ ಅವರು ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಲಿಸ್ ಇಲಾಖೆಯು ಈ ದೂರನ್ನು ಸ್ವೀಕರಿಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಒಂದು ವೇಳೆ ವಿಳಂಬ ಧೋರಣೆ ಅನುಸರಿಸಿದರೆ ಮುಂಬರುವ ದಿನಗಳಲ್ಲಿ ಸಮಾಜದ ಎಲ್ಲಾ ಸಂಘಟನೆಗಳನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆಯ ಪ್ರಶಾಂತ್ ಎಚ್ಚರಿಸಿದ್ದಾರೆ.