image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಪುತ್ತೂರು : ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಗಸ್ಟ್ 1, 2026ರ ಶನಿವಾರ ಬೆಳಿಗ್ಗೆ 11:00 ಗಂಟೆಗೆ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ನಡೆಯಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಶಸ್ತ್ರ ಪಡೆಗಳ ವೀರಗಾಥೆಯನ್ನು ಸ್ಮರಿಸುತ್ತಾ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಈ ಸಂದರ್ಭದಲ್ಲಿ ಗೌರವಾಪಣೆ ಹಾಗೂ ನಮನ ಸಲ್ಲಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಅವರು ವಿದ್ಯಾರ್ಥಿಗಳೊಂದಿಗೆ "Catch Up With Captain" ಎಂಬ ವಿಶೇಷ ಸಂವಾದ ನಡೆಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ವಹಿಸಲಿದ್ದಾರೆ. ವಿಶೇಷ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಕಾರ್ಯದರ್ಶಿಗಳಾದ ಶ್ರೀ ವಿಜಯನಾರಾಯಣ ಕೆ. ಎಂ. ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

Category
ಕರಾವಳಿ ತರಂಗಿಣಿ