image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಗಸ್ಟ್ 3ಕ್ಕೆ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಭಕ್ತಿ ಗೀತೆಗಳ ಸಂಕಲನ 'ನೀರಾಜನ' ಬಿಡುಗಡೆ

ಆಗಸ್ಟ್ 3ಕ್ಕೆ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಭಕ್ತಿ ಗೀತೆಗಳ ಸಂಕಲನ 'ನೀರಾಜನ' ಬಿಡುಗಡೆ

ಮಂಗಳೂರು : ಅಂತಾರಾಷ್ಟ್ರೀಯ ಆರ್ಯಭಟ ಹಾಗೂ ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮತ್ತು ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ರಚಿಸಿರುವ ತುಳು - ಕನ್ನಡ ಭಕ್ತಿಗೀತೆಗಳ ಸಂಕಲನ 'ನೀರಾಜನ' ಇದೇ ಆಗಸ್ಟ್ 3ರ ಸೋಮವಾರ ಸಂಜೆ 6:30ಕ್ಕೆ ನಗರದ ನಮ್ಮ ಕುಡ್ಲ ವಾಹಿನಿಯ ದಿ| ಬಿ.ಪಿ. ಕರ್ಕೇರ ಮತ್ತು ಲಕ್ಷ್ಮೀ ಕರ್ಕೇರ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಹಮದ್ ನಗರದ ಉದ್ಯಮಿ ಹಾಗೂ ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ನಿಕಟಪೂರ್ವ ಯೋಜನಾ ನಿರ್ದೇಶಕ ಡಾ. ಬಿ. ಶಿವರಾಮ ಶೆಟ್ಟಿ ಕೃತಿ ಪರಿಚಯ ಮಾಡಿಕೊಡಲಿದ್ದಾರೆ. ಸಮಾರಂಭದಲ್ಲಿ ಆಕೃತಿ ಆಶಯ ಪಬ್ಲಿಕೇಷನ್ಸ್‌ನ ಕಲ್ಲೂರು ನಾಗೇಶ್, ಕೃತಿಕರ್ತ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹಾಗೂ ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ ಉಪಸ್ಥಿತರಿರಲಿದ್ದಾರೆ.

ಇದೇ ವೇದಿಕೆಯಲ್ಲಿ ನಮ್ಮ ಕುಡ್ಲ ವಾಹಿನಿಯ ವರ್ಷಾಕಾಲದ ವಿಶೇಷ ಕಾರ್ಯಕ್ರಮ 'ಪುರಾಣ ಲೋಕ'ದ ಸಾಪ್ತಾಹಿಕ ಪ್ರಸಾರಕ್ಕೆ ಡಾ| ಎಂ. ಮೋಹನ ಆಳ್ವ ಚಾಲನೆ ನೀಡಲಿದ್ದಾರೆ. ಸಂತ ಕವಿ ಕನಕದಾಸರ 'ನಳ ಚರಿತ್ರೆ' ಕಾವ್ಯದ ತುಳು - ಕನ್ನಡ ಆವೃತ್ತಿಗಳನ್ನು ಯಕ್ಷಗಾನ ಭಾಗವತ ದೇವಿಪ್ರಸಾದ್ ಆಳ್ವ ತಲಪಾಡಿ ಹಾಗೂ ಹರಿಕಥಾ ವಿದುಷಿ ಮಂಜುಳಾ ಜಿ. ರಾವ್ ಇರಾ ವಾಚಿಸಲಿದ್ದು, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ವ್ಯಾಖ್ಯಾನ ನೀಡಲಿದ್ದಾರೆ. ಮುಂದಿನ ವಾರದಿಂದ ಪ್ರತಿ ಭಾನುವಾರ ಬೆಳಿಗ್ಗೆ ಈ ಸರಣಿಯ ಅರ್ಧ ತಾಸಿನ ಸಂಚಿಕೆಗಳು ಪ್ರಸಾರವಾಗಲಿದ್ದು, ವಾರದ ನಡುವೆ ಸಾಂದರ್ಭಿಕ ಮರುಪ್ರಸಾರವೂ ಇರಲಿದೆ.

Category
ಕರಾವಳಿ ತರಂಗಿಣಿ