image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆ ಮಂಗಳೂರಿನಲ್ಲಿ 'ತ್ಯಾಗಮಯಿ ಮೊಳಹಳ್ಳಿ' ಕೃತಿ ಬಿಡುಗಡೆ

ನಾಳೆ ಮಂಗಳೂರಿನಲ್ಲಿ 'ತ್ಯಾಗಮಯಿ ಮೊಳಹಳ್ಳಿ' ಕೃತಿ ಬಿಡುಗಡೆ

ಮಂಗಳೂರು:ಸಹಕಾರವನ್ನೇ ಜೀವನದ ಧೈಯವನ್ನಾಗಿ, ಜನಸೇವೆಯನ್ನು ಪರಮ ಗುರಿಯನ್ನಾಗಿ ಮತ್ತು ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯ ಧ್ಯೋತಕವಾಗಿ 'ತ್ಯಾಗಮಯಿ ಮೊಳಹಳ್ಳಿ' ಕೃತಿಯು ಬಿಡುಗಡೆಯಾಗಲಿದೆ.

ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸೇವೆಯ ನೆನಪಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಆಗಸ್ಟ್ 3ರಂದು ಪೂರ್ವಾಹ್ನ 11.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಈ ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರು 'ತ್ಯಾಗಮಯಿ ಮೊಳಹಳ್ಳಿ' ಕೃತಿಯ ಲೇಖಕರಾಗಿದ್ದಾರೆ.

Category
ಕರಾವಳಿ ತರಂಗಿಣಿ