image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಲೇಜು ಆವರಣದಲ್ಲಿ ಗಾಂಜಾ ಪತ್ತೆ: ಮೂವರ ಬಂಧನ

ಕಾಲೇಜು ಆವರಣದಲ್ಲಿ ಗಾಂಜಾ ಪತ್ತೆ: ಮೂವರ ಬಂಧನ

ಮಂಗಳೂರು: ನಗರದ ಕಾಲೇಜಿನಲ್ಲಿ ತೀವ್ರಗೊಳಿಸಿದ ಕಣ್ಗಾವಲು ಮತ್ತು ಸಕ್ರಿಯ ತಪಾಸಣೆಯ ಫಲವಾಗಿ, ಸಣ್ಣ ಪುಟ್ಟ ಪಾಕೆಟ್‌ಗಳಲ್ಲಿ ತುಂಬಿದ್ದ ಸುಮಾರು 290 ಗ್ರಾಂ ಗಾಂಜಾವನ್ನು ಹೊಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ರೆಡ್‌ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಪ್ರಮುಖ ಘಟನೆ ವರದಿಯಾಗಿದೆ.

ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ನಂತರ ಕಾಲೇಜುಗಳು ತಮ್ಮ ಭದ್ರತೆ ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು ಹೆಚ್ಚು ಬಿಗಿಗೊಳಿಸಿವೆ. ಇದರ ಭಾಗವಾಗಿ ನಡೆಸಿದ ತಪಾಸಣೆಯಲ್ಲಿ ಈ ಮೂವರು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಕಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 27(ಬಿ) (ಸೇವನೆ) ಮತ್ತು 8(ಸಿ) ಅಡಿಯಲ್ಲಿ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗಿದೆ. ಕಾಲೇಜಿಗೆ ಗಾಂಜಾ ತಂದಿದ್ದನೆನ್ನಲಾದ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆತನ ಶೈಕ್ಷಣಿಕ ಹಿನ್ನೆಲೆ ಹಾಗೂ ವಶಪಡಿಸಿಕೊಂಡ ಗಾಂಜಾದ ಪ್ರಮಾಣವನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಸದ್ಯ ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಪೆಡ್ಲರ್ ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದು ಸಮಾಜದಲ್ಲಿ ಅತ್ಯಂತ ಉತ್ತೇಜಕ ಬೆಳವಣಿಗೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಾಲೇಜುಗಳು ಸ್ವಯಂಪ್ರೇರಿತವಾಗಿ ಇಂತಹ ತಪಾಸಣೆಗಳನ್ನು ನಡೆಸುತ್ತಿದ್ದು, ಅಲ್ಲಿನ ಮಾದಕ ದ್ರವ್ಯ ವಿರೋಧಿ ಸಮಿತಿಗಳು (ADCs) ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ಎಲ್ಲಾ ಕಾಲೇಜುಗಳು ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಿದರೆ, ಅತ್ಯಲ್ಪಾವಧಿಯಲ್ಲಿಯೇ ಸಂಪೂರ್ಣ ಡ್ರಗ್ಸ್ ಮುಕ್ತ ಮತ್ತು ಆರೋಗ್ಯಕರ ಕ್ಯಾಂಪಸ್‌ಗಳನ್ನು ನಿರ್ಮಿಸುವುದು ಸಾಧ್ಯವಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ