ಮಂಗಳೂರು: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಬೆಳಿಗ್ಗೆ 9:30 ರಿಂದ 11:00 ಗಂಟೆಯವರೆಗೆ ಸುಳ್ಯ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಮಧ್ಯಾಹ್ನ 12:00 ರಿಂದ 2:00 ಗಂಟೆಯವರೆಗೆ ಕಡಬ ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ತಾಲೂಕು ಪಂಚಾಯತ್‌ನಲ್ಲಿ ಸಭೆ ಜರುಗಿಸಲಿದ್ದಾರೆ. ಹಾಗೂ ಅಪರಾಹ್ನ 3:30 ರಿಂದ ಸಂಜೆ 5:30 ರವರೆಗೆ ಮೂಡಬಿದ್ರೆ ತಾಲೂಕಿನ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ, ತಾಲೂಕು ಪಂಚಾಯತ್‌ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಲಿದ್ದಾರೆ.