image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೋಹನ್ ಕಾರ್ಪೋರೇಶನ್ ಪ್ರಸ್ತುತಿಯ 'ಫ್ರೀಡಮ್ ಪ್ಯಾಲೆಟ್ 2026' ಮಕ್ಕಳ ಚಿತ್ರಕಲಾ ಸ್ಪರ್ಧೆ

ರೋಹನ್ ಕಾರ್ಪೋರೇಶನ್ ಪ್ರಸ್ತುತಿಯ 'ಫ್ರೀಡಮ್ ಪ್ಯಾಲೆಟ್ 2026' ಮಕ್ಕಳ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಭಾಗವಾಗಿ ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ. ಮಕ್ಕಳಲ್ಲಿ ಸೃಜನಶೀಲತೆ, ಕಲಾತ್ಮಕ ಅಭಿವ್ಯಕ್ತಿ ಹಾಗೂ ದೇಶಪ್ರೇಮದ ಭಾವನೆಯನ್ನು ಉತ್ತೇಜಿಸುವ ಆಶಯದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಸ್ಪರ್ಧೆಯು ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಭಾಗವಹಿಸುವವರು ಸ್ವಾತಂತ್ರ್ಯೋತ್ಸವದ ವಿಷಯವನ್ನು ಆಧರಿಸಿ ಚಿತ್ರ ರಚಿಸಿ, 2026ರ ಆಗಸ್ಟ್ 10ರ ಒಳಗಾಗಿ ರೋಹನ್ ಕಾರ್ಪೊರೇಶನ್‌ ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ಲಿಂಕ್ ಅಥವಾ QR ಕೋಡ್ ಮೂಲಕ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಚಿತ್ರಗಳಲ್ಲಿ ಅತ್ಯುತ್ತಮ 60 ಚಿತ್ರಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. 'ಪಿಕ್ಸ್‌ನಿಲ್' (Pixncil) ಸಂಸ್ಥೆಯು ಈ ಸ್ಪರ್ಧೆಯ ಅಧಿಕೃತ ತೀರ್ಪುಗಾರರಾಗಿ ಭಾಗವಹಿಸಿದೆ.

ಅಂತಿಮ ಸುತ್ತಿನ ಸ್ಪರ್ಧೆಯು 2026ರ ಆಗಸ್ಟ್ 13ರಂದು ಮಂಗಳೂರಿನ ಬಿಜೈನಲ್ಲಿರುವ 'ರೋಹನ್ ಸಿಟಿ'ಯಲ್ಲಿ ನಡೆಯಲಿದ್ದು, ಆಯ್ಕೆಯಾದ ಸ್ಪರ್ಧಿಗಳು ನೇರ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅಂತಿಮ ಸುತ್ತಿನ ವಿಷಯವನ್ನು ಒಂದು ದಿನ ಮುಂಚಿತವಾಗಿ ಪ್ರಕಟಿಸಲಾಗುವುದು ಹಾಗೂ ಸ್ಪರ್ಧೆಗೆ ಅಗತ್ಯವಿರುವ ಎಲ್ಲಾ ಚಿತ್ರಕಲಾ ಸಾಮಗ್ರಿಗಳನ್ನು ಆಯೋಜಕರೇ ಒದಗಿಸಲಿದ್ದಾರೆ.

ಸ್ಪರ್ಧೆಯ ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುತ್ತಿದ್ದು, ಪ್ರಥಮ ಬಹುಮಾನವಾಗಿ ₹25,000, ದ್ವಿತೀಯ ಬಹುಮಾನ ₹15,000 ಹಾಗೂ ತೃತೀಯ ಬಹುಮಾನ ₹10,000 ಇರಲಿದೆ. ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ ಎಲ್ಲಾ ಸ್ಪರ್ಧಿಗಳಿಗೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

ಈ ಕುರಿತು ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ರೋಹನ್ ಮೊಂತೇರೊ ಮತ್ತು ನಿರ್ದೇಶಕರಾದ ಶ್ರೀ ಡಿಯೋನ್ ಮೊಂತೇರೊ ಅವರು, ಮಕ್ಕಳಲ್ಲಿ ಸಮಾಜಕ್ಕೆ ಸ್ಫೂರ್ತಿಯಾಗುವ ಸಾಮರ್ಥ್ಯವಿದ್ದು, ಅವರ ಚಿಂತನೆ, ಕಲ್ಪನಾ ಶಕ್ತಿ ಹಾಗೂ ಆತ್ಮವಿಶ್ವಾಸವನ್ನು ಪ್ರೋತ್ಸಾಹಿಸಲು ಈ ಅರ್ಥಪೂರ್ಣ ವೇದಿಕೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ದೂರವಾಣಿ ಸಂಖ್ಯೆ +91 9035511821 ಅಥವಾ ರೋಹನ್ ಕಾರ್ಪೊರೇಶನ್‌ನ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು.

Category
ಕರಾವಳಿ ತರಂಗಿಣಿ