image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಗೆ ಡಾಕ್ಟರೇಟ್ ಪದವಿ ಪ್ರದಾನ

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಗೆ ಡಾಕ್ಟರೇಟ್ ಪದವಿ ಪ್ರದಾನ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿ ಅವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ಪಿಎಚ್‌ಡಿ (ಡಾಕ್ಟರೇಟ್) ಪದವಿಯನ್ನು ನೀಡಿ ಗೌರವಿಸಿದೆ. ಅವರು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮರ್ಥ್ಯಗಳು, ಆಯ್ದ ಕನ್ನಡ ಭಾಷಾ ಸಾಮರ್ಥ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮರ್ಥ್ಯ ಹಾಗೂ ವಿಜ್ಞಾನ ವಿಷಯದ ಶೈಕ್ಷಣಿಕ ಸಾಧನೆಯನ್ನು ಅಭಿವೃದ್ಧಿಪಡಿಸುವಲ್ಲಿ ಅಂತರಶಿಸ್ತೀಯ ಬಹುಮಾಧ್ಯಮ ಬೋಧನಾ ವಿಧಾನವು ಬೀರುವ ಪರಿಣಾಮಕಾರಿತ್ವದ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದರು. ಈ ಸಂಶೋಧನಾ ಪ್ರಬಂಧವನ್ನು ಅಲೋಶಿಯಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ವಿಜಯಲಕ್ಷ್ಮಿ ನಾಯಕ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರೈಸಿದ್ದಾರೆ. ಮಲ್ಲಿಕಾ ಶೆಟ್ಟಿ ಅವರು ತಮ್ಮ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಶಿಕ್ಷಣವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲೇ ಪೂರೈಸಿದ್ದರು. ಮೂಡುಬಿದಿರೆಯ ಪುಚ್ಚೆಮೊಗರಿನ ದಿವಂಗತ ಭೋಜ ಶೆಟ್ಟಿ ಹಾಗೂ ಸುಲೋಚನ ಶೆಟ್ಟಿ ದಂಪತಿಗಳ ಪುತ್ರಿಯಾಗಿರುವ ಇವರು, ಅನಿವಾಸಿ ಉದ್ಯೋಗಿ ರಾಜೇಶ್ ಶೆಟ್ಟಿ ಅವರ ಪತ್ನಿಯಾಗಿದ್ದಾರೆ.

Category
ಕರಾವಳಿ ತರಂಗಿಣಿ