ಮೂಡುಬಿದಿರೆ : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ಆವರಣದಲ್ಲಿ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ - 2026’ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ನಡೆಯಲಿದೆ. ಉದ್ಘಾಟನಾ ಸಮಾರಂಭವು ಆಗಸ್ಟ್ 7ರಂದು ಬೆಳಿಗ್ಗೆ 9:30ಕ್ಕೆ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನೆರವೇರಲಿದೆ. ಈ ಬಾರಿಯ ಮೇಳದಲ್ಲಿ 350ಕ್ಕೂ ಹೆಚ್ಚು ಬಹುರಾಷ್ಟ್ರೀಯ ಹಾಗೂ ಸ್ಥಳೀಯ ಕಂಪನಿಗಳು ಭಾಗವಹಿಸುತ್ತಿದ್ದು, ಒಟ್ಟು 26,300ಕ್ಕೂ ಅಧಿಕ ಉದ್ಯೋಗಾವಕಾಶಗಳು ಅಭ್ಯರ್ಥಿಗಳಿಗೆ ಲಭ್ಯವಿರಲಿವೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ವೈದ್ಯಕೀಯ, ಅರೆ ವೈದ್ಯಕೀಯ, ಎಂಜಿನಿಯರಿಂಗ್, ನರ್ಸಿಂಗ್, ಕಲಾ, ವಾಣಿಜ್ಯ, ವಿಜ್ಞಾನ ಹಾಗೂ ಸ್ನಾತಕೋತ್ತರ ಪದವೀಧರರಿಗೆ ಈ ಮೇಳದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳನ್ನು ಸುಲಭವಾಗಿ ಗುರುತಿಸಲು ವಿದ್ಯಾರ್ಹತೆಗೆ ತಕ್ಕಂತೆ ‘ಸಪ್ತವರ್ಣ’ ಕಲರ್ ಕೋಡಿಂಗ್ ವ್ಯವಸ್ಥೆ ರೂಪಿಸಲಾಗಿದೆ. ಜೊತೆಗೆ ಪ್ರತಿಯೊಂದು ಕಂಪನಿಯ ವಿವರ, ಹುದ್ದೆ, ವೇತನ ಮತ್ತು ಸಂದರ್ಶನ ಕೊಠಡಿಯ ಮಾಹಿತಿ ಒಳಗೊಂಡ ವಿಶೇಷ ಕೈಪಿಡಿಯನ್ನು ಒದಗಿಸಲಾಗುತ್ತಿದೆ.
ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ಮೊದಲ ಬಾರಿಗೆ ಎಐ (AI) ಚಾಟ್‌ಬಾಟ್ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಆವರಣದಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿವರ ನಮೂದಿಸಿದರೆ ಅಭ್ಯರ್ಥಿಯ ಅರ್ಹತೆಗೆ ಹೊಂದುವ 5 ಅತ್ಯುತ್ತಮ ಕಂಪನಿಗಳನ್ನು ಎಐ ಶಿಫಾರಸು ಮಾಡುತ್ತದೆ. ಮಳೆಗಾಲದ ಹಿನ್ನೆಲೆಯಲ್ಲಿ ಆವರಣದಾದ್ಯಂತ ಮಳೆನಿರೋಧಕ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಭದ್ರತೆಯೊಂದಿಗೆ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. 800ಕ್ಕೂ ಹೆಚ್ಚು ಹೆಚ್‌ಆರ್ ಅಧಿಕಾರಿಗಳು ಹಾಗೂ 1,000ಕ್ಕೂ ಹೆಚ್ಚು ಸ್ವಯಂಸೇವಕರು ಕಾರ್ಯನಿರ್ವಹಿಸಲಿದ್ದಾರೆ.
ಹೊರ ಜಿಲ್ಲೆಗಳಿಂದ ಆಗಮಿಸುವ ಅಭ್ಯರ್ಥಿಗಳಿಗಾಗಿ 1,500 ಕೊಠಡಿಗಳ ಉಚಿತ ವಸತಿ, ರಿಯಾಯಿತಿ ದರದಲ್ಲಿ ಆಹಾರ ಹಾಗೂ ಬೈಂದೂರು, ಉಡುಪಿ, ಬೆಳ್ತಂಗಡಿ, ಪುತ್ತೂರು ಭಾಗಗಳಿಂದ ಉಚಿತ ಬಸ್ ಸೌಕರ್ಯ ಒದಗಿಸಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್‌ಲೈನ್ ನೋಂದಣಿ ಕಡ್ಡಾಯವಾಗಿದ್ದು, ಅಭ್ಯರ್ಥಿಗಳು [http://alvaspragati.com/CandidateRegistrationPage](http://alvaspragati.com/CandidateRegistrationPage) ವೆಬ್‌ಸೈಟ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ 9611750531 / 9741440490 ಸಂಪರ್ಕಿಸಬಹುದು.