image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸುಳ್ಯದಲ್ಲಿ ಅರಿವೇ ಜೀವ - ಬದುಕು ಮಹಾ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ಚಾಲನೆ

ಸುಳ್ಯದಲ್ಲಿ ಅರಿವೇ ಜೀವ - ಬದುಕು ಮಹಾ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ಚಾಲನೆ

ಸುಳ್ಯ: ಕ್ಯಾನ್ಸರ್ ಬಗ್ಗೆ ಮುಂಚಿತವಾಗಿ ಅರಿವು ಮೂಡಿಸುವುದೇ ಇದನ್ನು ತಡೆಗಟ್ಟುವ ಏಕೈಕ ಮಾರ್ಗವಾಗಿದ್ದು, ಇಂತಹ ಅಭಿಯಾನಗಳು ಪ್ರತಿಯೊಂದು ಮನೆಗೂ ತಲುಪಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

​ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ ಮತ್ತು ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸ್ಥಳೀಯ ರೋಟರಿ ಸಮುದಾಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ "ಅರಿವೇ ಜೀವ - ಬದುಕು" ಮಹಾ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಾ ಸಂಘ-ಸಂಸ್ಥೆಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಕ್ಯಾನ್ಸರ್ ಕುರಿತು ಮಾಹಿತಿ ನೀಡಬೇಕಾದ ಅನಿವಾರ್ಯತೆಯಿದ್ದು, ರೋಟರಿ ಹಾಗೂ ಪತ್ರಕರ್ತರ ಈ ಒಮ್ಮುಖ ಕೆಲಸ ಶ್ಲಾಘನೀಯ ಎಂದರು.

​ಆರೋಗ್ಯವಂತ ಸಮಾಜ ನಿರ್ಮಾಣವೆಂದರೆ ಅದು ಈಗಿನ ಮಕ್ಕಳಿಂದ ಮಾತ್ರ ಸಾಧ್ಯ. ಅದಕ್ಕಾಗಿಯೇ ಶಾಲಾ ಆವರಣದಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸಲಾಗಿದೆ. ಆಹಾರವೇ ಔಷಧವಾಗಿದ್ದು, ಮಕ್ಕಳಿಗೆ ಯಾವ ರೀತಿಯ ಪೌಷ್ಟಿಕ ಆಹಾರ ಅಗತ್ಯವೆಂಬುದನ್ನು ಪೋಷಕರು ತಿಳಿದುಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

​ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಾಫ, ಮತ್ತು ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಶಾಲಾ ಸಂಚಾಲಕ ಪ್ರಭಾಕರ ನಾಯರ್ ಹಾಗೂ ರೋಟರಿ ಕ್ಲಬ್ ಸದಸ್ಯ ಮಧುಸೂದನ್ ಕುಂಭಕೋಡು ಉಪಸ್ಥಿತರಿದ್ದರು. ಸುಳ್ಯ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಪಂಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Category
ಕರಾವಳಿ ತರಂಗಿಣಿ