image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆ. 21ರಂದು ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ಸೆ. 21ರಂದು ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ಉಜಿರೆ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಸಮುದಾಯದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಂದು ಸೋಮವಾರ ಬೆಳ್ತಂಗಡಿಯ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಾಗುವುದು ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ತಿಳಿಸಿದ್ದಾರೆ. ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಹಾಗೂ ಶ್ರಾವಕ-ಶ್ರಾವಿಕೆಯರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಹೊಂಬುಜ ಜೈನಮಠದ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಮತ್ತು ಆಶೀರ್ವಾದದೊಂದಿಗೆ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಉಭಯ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳು ಬಸದಿಯಲ್ಲಿ ದೊರೆಯುವ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 31ರ ಒಳಗಾಗಿ ಕೆ. ಜಯವರ್ಮರಾಜ ಬಳ್ಳಾಲ್, ಅನುವಂಶಿಕ ಮೊಕ್ತೇಸರರು, ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನಪೇಟೆ, ಬೆಳ್ತಂಗಡಿ – 574 214 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ವಿದ್ಯಾರ್ಥಿ ಪ್ರೋತ್ಸಾಹಧನ ಮಾತ್ರವಲ್ಲದೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕ್ಯಾನ್ಸರ್, ಕಿಡ್ನಿ ಹಾಗೂ ಹೃದಯ ಸಂಬಂಧಿ ರೋಗಪೀಡಿತರಿಗೂ ಈ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 9448180439 ಅನ್ನು ಸಂಪರ್ಕಿಸಬಹುದು.

Category
ಕರಾವಳಿ ತರಂಗಿಣಿ