image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ. 13ರಂದು ಬೆಂಗಳೂರಿನಲ್ಲಿ ಹೊರಗುತ್ತಿಗೆ ನೌಕರರ ಸಮಾವೇಶ

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ. 13ರಂದು ಬೆಂಗಳೂರಿನಲ್ಲಿ ಹೊರಗುತ್ತಿಗೆ ನೌಕರರ ಸಮಾವೇಶ

ಮಂಗಳೂರು : ರಾಜ್ಯ ಕಾರ್ಮಿಕ ಇಲಾಖೆಯು ವಿವಿಧ ಉದ್ಯೋಗಗಳ ಕನಿಷ್ಠ ವೇತನವನ್ನು ನಿಗದಿಪಡಿಸಿ ಆದೇಶ ನೀಡಿದ್ದರೂ ಅದನ್ನು ಜಾರಿಗೆ ತಂದಿಲ್ಲ. ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣವೇ ಜಾರಿಗೊಳಿಸಲು ಒತ್ತಾಯಿಸಿ ಆಗಸ್ಟ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಬೃಹತ್ ಆಗ್ರಹ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ ಎಂ. ಬಿ. ನಾಗಣ್ಣ ಗೌಡ ಮಾಹಿತಿ ನೀಡಿದರು. ಕಾರ್ಮಿಕರ ವೇತನ ಪರಿಷ್ಕರಣೆ ಕುರಿತು ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ജനಪರ ಆಡಳಿತದ ನಿರೀಕ್ಷೆಯಿಂದ ಜನರು ಸರ್ಕಾರಕ್ಕೆ ಬಹುಮತ ನೀಡಿದ್ದು, ಸರ್ಕಾರವು ಜನರ ಬದುಕಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕಾಗಿದೆ ಎಂದು ಆಗ್ರಹಿಸಿದರು.

ಕಳೆದ ಮೂರೂವರೆ ವರ್ಷಗಳಿಂದ ಸರ್ಕಾರವು ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಿದೆಯೇ ಹೊರತು, ಬೆಲೆ ಏರಿಕೆಗೆ ಅನುಗುಣವಾಗಿ ನೌಕರರು ಹಾಗೂ ಕಾರ್ಮಿಕರ ವೇತನ ಪರಿಷ್ಕರಿಸುವ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು. ವೇತನ ಪರಿಷ್ಕರಣೆ ಜಾರಿಯಾಗದಿದ್ದರೆ ಮುಂದಿನ ಚುನಾವಣೆಯಲ್ಲಿ ಸರ್ಕಾರದ ವಿರುದ್ಧವೇ ಮತ ಚಲಾಯಿಸುವಂತೆ ನೌಕರರು ಮತ್ತು ಕಾರ್ಮಿಕರಿಗೆ ಕರೆ ನೀಡುವ ಅನಿವಾರ್ಯತೆ ಎದುರಾಗಲಿದೆ ಎಂದು ಎಚ್ಚರಿಸಿದ ಅವರು, ಬೆಂಗಳೂರಿನ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 250 ಮಂದಿ ಭಾಗವಹಿಸಲಿದ್ದಾರೆ ಎಂದರು.

ಈ ಸಮಾವೇಶದ ಮೂಲಕ ಸರ್ಕಾರಕ್ಕೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಎಚ್ಚರಿಕೆ ನೀಡಲಾಗುವುದು. ಇದಲ್ಲದೆ, ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯ ನೌಕರರ ಪ್ರಮುಖ ಬೇಡಿಕೆಗಳನ್ನೂ ಪರಿಗಣಿಸಿ ಪರಿಹಾರ ಒದಗಿಸಲು ಆಗ್ರಹಿಸಲಾಗುವುದು. ರಾಜ್ಯದ ವಿವಿಧ ಇಲಾಖೆಗಳ ಸುಮಾರು 2 ಲಕ್ಷ ಹೊರಗುತ್ತಿಗೆದಾರರಿಗೆ ಸರ್ಕಾರವೇ ಹೊರಡಿಸಿದ ಆದೇಶ ಜಾರಿಗೆ ತರಲು ಯಾವುದೇ ಕಾನೂನಾತ್ಮಕ ಅಡ್ಡಿ ಇಲ್ಲ. ಆದರೆ ಕಾರ್ಮಿಕ ಇಲಾಖೆಯು ಕೇವಲ ಹೆಚ್ಚುವರಿ ಕನಿಷ್ಠ ವೇತನದ ಮಾಹಿತಿ ನೀಡುವುದಕ್ಕೆ ಸೀಮಿತವಾಗಿದ್ದು, ಅಧಿಸೂಚನೆ ಹೊರಡಿಸುವ ಕಾರ್ಯ ಮಾಡುತ್ತಿಲ್ಲ ಎಂದು ದೂರಿದರು. ಪತ್ರಿಕಾಗೋಷ್ಟಿಯಲ್ಲಿ ಕರಾವಳಿ ವಿಭಾಗದ ಸಂಚಾಲಕ ಬಿ. ಕೆ. ಅಣ್ಣಪ್ಪ, ಮುಖಂಡರಾದ ಮಂಜುನಾಥ, ಕೃಷ್ಣ ಪೂಜಾರಿ, ಮಲ್ಲನಾಥ, ಯಶವಂತ್ ಹಾಗೂ ಡಾ. ನಾಗೇಂದ್ರ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ